Saturday, December 6, 2025
Saturday, December 6, 2025

Taluk Panchayath Kadur ದೊಡ್ಡಪಟ್ಟಣಗೆರೆ ಗ್ರಾಪಂ ವ್ಯಾಪ್ತಿಯ ರಸ್ತೆ,ಚರಂಡಿ,ನೀರಿನ ಸಮಸ್ಯೆಗೆ ಆದ್ಯ ಗಮನ-ಶಾಲಿನಿ ದಿನೇಶ್

Date:

Taluk Panchayath Kadur ಕಡೂರು ತಾಲ್ಲೂಕಿನ ದೊಡ್ಡಪಟ್ಟಣಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಾಲಿನಿ ದಿನೇಶ್ ಮತ್ತು ಉಪಾಧ್ಯಕ್ಷರಾಗಿ ನಾಗರತ್ನ ಮಹೇಶ್ ಅವಿರೋಧವಾಗಿ ಆಯ್ಕೆಯಾದರು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಮತ್ತು ಬಿಸಿಎಂ ಉಪಾಧ್ಯಕ್ಷ ಸ್ಥಾನಗಳಿಗೆ ಶಾಲಿನಿ ದಿನೇಶ್ ಮತ್ತು ನಾಗರತ್ನ ಮಹೇಶ್ ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ರಾಜಪ್ಪ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Taluk Panchayath Kadur ಅಭಿನಂದನೆ ಸಲ್ಲಿಸಿ ಮಾತನಾಡಿದ ಬಿಜೆಪಿ ಮುಖಂಡ ಜಿಗಣೇಹಳ್ಳಿ ನೀಲಕಂಠಪ್ಪ ಅಧಿಕಾರ ವಿಕೇಂದ್ರೀ ಕರಣದ ಪ್ರಜಾ ಪ್ರಭುತ್ವದಲ್ಲಿ ಸ್ಪರ್ಧೆಗಳು ಅನಿವಾರ್ಯ. ಹಾಗಾಗಿ ಚುನಾವಣೆ ನಂತರ ಎಲ್ಲರ ಜನಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ನೂತನ ಅಧ್ಯಕ್ಷೆ ಶಾಲಿನಿ ದಿನೇಶ್ ಮಾತನಾಡಿ ಗ್ರಾ.ಪಂ. ವ್ಯಾಪ್ತಿಗೆ ಸೇರುವ 11 ಗ್ರಾಮಗಳಿಗೆ ಮೂಲ ಸೌಕರ್ಯಗಳಾದ ರಸ್ತೆ, ಚರಂಡಿ, ನೀರಿನ ಸಮಸ್ಯೆ ಬಾರದಂತೆ ಎಲ್ಲಾ ಸದಸ್ಯರ ಸಲಹೆ ಮತ್ತು ಅಭಿಪ್ರಾಯ ಪಡೆದು ಅಭಿವೃದ್ದಿಗೆ ಮುಂದಾಗಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಹನುಮಂತಪ್ಪ, ಗಿರೀಶ್ ನಾಯ್ಕ, ಶೋಭಾ ರವಿ, ನಾಗರಾಜ ನಾಯ್ಕ, ಶೃತಿ, ಬಿಜೆಪಿ ಮುಖಂಡ ಮೌನೇಶ್, ದೇವರಾಜ್, ತಮ್ಮಯ್ಯ, ಮಹೇಶ್, ತಿಮ್ಮಯ್ಯ, ಜಗದೀಶ್ ಹಾಗೂ ಪಟ್ಟಣಗೆರೆ ಮತ್ತು ಬಂಡಿಕೊಪ್ಪಲಿನ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...