Sahyadri Arts College ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿಯಾಗಿದೆ ಎಂದು ಕುವೆಂಪು ವಿ.ವಿ.ಯ ಎನ್. ಎಸ್. ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು.
ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ 2022-23ನೇ ಸಾಲಿನ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
Sahyadri Arts College ಇಂದು ನಾವೆಲ್ಲರೂ ಹೆಚ್ಚು ಹೆಚ್ಚು ಸ್ವಾರ್ಥಿಗಳಾಗುತ್ತಿದ್ದೇವೆ. ನಿಸ್ವಾರ್ಥ ಮನೋಭಾವ ಎನ್ನುವುದು ಮರೀಚಿಕೆಯಾಗಿದೆ. ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ನಿಸ್ವಾರ್ಥ ಮನೋಭಾವವನ್ನು ರೂಡಿಸಿಕೊಳ್ಳಲು ಎನ್ಎಸ್ಎಸ್ ಒಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಾ.ಕೆ.ಜಿ ವೆಂಕಟೇಶ್, ವಿದ್ಯಾರ್ಥಿಗಳು ಕೇವಲ ಅಕ್ಷರ ಜ್ಞಾನ ಪಡೆಯುವುದು ಮಾತ್ರ ಮುಖ್ಯವಲ್ಲ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಡಾ. ಟಿ. ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಸಮಿತಿ ಸಂಚಾಲಕರಾದ ಡಾ. ಕೆ.ಎನ್. ಮಂಜುನಾಥ್, ಕಾರ್ಯಕ್ರಮ ಅಧಿಕಾರಿಗಳಾದ ಡಾ. ಪ್ರಕಾಶ್ ಮರ್ಗನಳ್ಳಿ ಡಾ. ಮುದಕಪ್ಪ, ಕನ್ನಡ ಪ್ರಾಧ್ಯಾಪಕರಾದ ಡಾ. ಹಾಲಮ್ಮ ಎಂ., ಲವ ಜಿ.ಆರ್ . ಉಪಸ್ಥಿತರಿದ್ದರು.