Wednesday, December 17, 2025
Wednesday, December 17, 2025

Saint Joseph’s Girls’ High School ಪರಿಣಾಮಕಾರಿ ಬೋಧನೆ ಮೂಲಕ ಮಕ್ಕಳಲ್ಲಿ ವಿಜ್ಞಾನದ ಅರಿವು ಬೆಳೆಸಬೇಕು- ಎ.ಎನ್.ಮಹೇಶ್

Date:

Saint Joseph’s Girls’ High School ಆಧುನಿಕತೆಯ ಕಾಲಘಟ್ಟದಲ್ಲಿ ಶಾಲಾ ಮಕ್ಕಳಿಗೆ ವಿಜ್ಞಾನದ ಅರಿವಿನ ಕೊರತೆ ಯಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಸಕ್ರಿಯರಾಗಬೇಕು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಗೌರವಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಚಿಕ್ಕಮಗಳೂರು ನಗರದ ಸಂತಜೋಸೆಫರ ಬಾಲಿಕಾ ಪ್ರೌಢಶಾಲೆಯಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣ ಇಲಾಖೆ, ಶಾಲಾ ಮಕ್ಕಳ ಇಲಾಖೆ, ರಾಯಲ್ ಸೊಸೈಟಿ ಆಫ್ ಕೆಮಿಸ್ಟಿ ಮತ್ತು ಜಿಲ್ಲಾ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಪದ್ಮಶ್ರೀ ಯುಸೂಫ್ ಹಮೀದ್ ಪ್ರೇರಣೆಯ ವಿಜ್ಞಾನ ಕಾರ್ಯಕ್ರಮವನ್ನು ಪುಸ್ತಕ ಬಿಡುಗಡೆ ಗೊಳಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಗಣ ತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯಗಳು ಕಬ್ಬಿಣದ ಕಡಲೆಯಂತಾಗಿದೆ. ವಿರ್ದ್ಯಾಥಿಗಳು ಮುತುವರ್ಜಿ ವಹಿಸಿ ಶ್ರದ್ದೆ ಹಾಗೂ ಆಳವಾಗಿ ಅಧ್ಯಯನದಲ್ಲಿ ತೊಡಗಿದರೆ ಸಂಬಂಧಿಸಿದ ವಿಷಯಗಳು ಅತ್ಯಂತ ಸುಲಭವಾಗಲಿದೆ ಎಂದು ಹೇಳಿದರು.

Saint Joseph’s Girls’ High School ಹಿಂದಿನ ಸಮಯದಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ರೀತಿಯ ತರಬೇತಿಗಳಿರಲಿಲ್ಲ. ಕಾಲಕ್ಕೆ ತಕ್ಕಂತೆ ಎಲ್ಲವು ಬದಲಾಗಿದ್ದು ವಿದ್ಯಾರ್ಥಿಗಳಿಗೆ ವಿಜ್ಞಾನದ ಅರಿವು ಮೂಡಿಸುವ ಕ್ವಿಜ್, ಮಕ್ಕಳ ವಿಜ್ಞಾನ ಸಮಾವೇಶ ತರ ಬೇತಿಯನ್ನು ರಾಜ್ಯ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸು ತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಮಾತನಾಡಿ ಇಂದಿನ ಆಧುನಿಕತೆಯಲ್ಲಿ ಮಕ್ಕಳು ಸಣ್ಣಪುಟ್ಟ ವಸ್ತು, ಪ್ರಾಣ ಗಳನ್ನು ಸ್ಪರ್ಶಿಸುವುದು ಹಾಗೂ ಹಣ್ಣು, ಬೀಜಗಳನ್ನು ಗುರುತಿಸುವುದು ಕಡಿಮೆಯಾಗುತ್ತಿದೆ. ಈ ಬಗ್ಗೆ ಶಿಕ್ಷಕರು ಮುಂಜಾಗ್ರತಾ ಕ್ರಮವಹಿಸಬೇಕು. ಮಕ್ಕಳ ಮನಸ್ಸಿನಲ್ಲಿ ಮನದಟ್ಟಾಗುವಂತೆ ಬೋಧಿಸುವ ಮೂಲಕ ಮುನ್ನೆಡೆಸಬೇಕು ಎಂದು ಕಿವಿಮಾತು ಹೇಳಿದರು.

ವಿಜ್ಞಾನ ಕೇಂದ್ರದ ಸಹ ಕಾರ್ಯದರ್ಶಿ ಪ್ರಶಾಂತ್ ಪ್ರಾಸ್ತಾವಿಕವಾಗಿ ಮಾತನಾಡಿ ವಿಜ್ಞಾನ ಕಾರ್ಯಕ್ರಮಗಳ ನ್ನು ಆಯೋಜಿಸುವ ಸಂಬಂಧ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ಸ್ವಲ್ಪ ತಡವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಕೆಲವು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಎರಡು ದಿನದ ಕಾರ್ಯಾಗಾರ ಹಮ್ಮಿಕೊಂಡಿದ್ದು ತರಬೇತಿ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯ ಕೃಷ್ಣಮೂರ್ತಿ ಅರಸ್, ಜಿಲ್ಲಾ ವಿಜ್ಞಾನ ಕೇಂದ್ರದ ಅಧ್ಯಕ್ಷ ಸತ್ಯನಾರಾಯಣ್, ಉಪಾಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ಪ್ರಕಾಶ್, ಡಯಟ್ ಹಿರಿಯ ಉಪನ್ಯಾಸಕ ಶರಶ್ಚಂದ್ರ, ಪ್ರಶಾಂತ್, ರಾಸಾಯನಿಕ ಶಾಸ್ತç ಪ್ರೊ. ಡಾ|| ಕಂದಗಲ್, ಸಂತ ಜೋಸೆಫರ ಶಾಲೆಯ ಶಿಕ್ಷಕ ಪ್ರಕಾಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...