Thursday, June 18, 2026
Thursday, June 18, 2026

Department of Youth Empowerment and Sports ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಸ್ಪರ್ಧೆ

Date:

Department of Youth Empowerment and Sports ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 2023-24ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನುವ ಏರ್ಪಡಿಸಲಾಗಿದೆ.

ದಿ:03/09/2023 ರಂದು ಸೊರಬ ತಾಲೂಕು ಕ್ರೀಡಾಂಗಣ, ದಿ:07/09/2023ರಂದು ಹೊಸನಗರ ತಾಲೂಕು ಕ್ರೀಡಾಂಗಣ, ದಿ:10/09/2023 ರಂದು ಭದ್ರಾವತಿ ವಿ.ಐ.ಎಸ್.ಎಲ್ ಕ್ರೀಡಾಂಗಣ ಮತ್ತು ಸಾಗರ ನೆಹರೂ ಮೈದಾನ, ದಿ:16/09/2023 ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣ, ದಿ:24/09/2023 ರಂದು ಶಿಕಾರಿಪುರ ತಾಲೂಕು ಕ್ರೀಡಾಂಗಣ, ದಿ:30/09/2023ರಂದು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.

Department of Youth Empowerment and Sports ಅಥ್ಲೇಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದ್ದು, ಆಯಾ ತಾಲೂಕಿನ ಕ್ರೀಡಾಪಟುಗಳು ಆಯಾ ತಾಲೂಕಿನ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಗುಂಪು ಸ್ಪರ್ಧೆಗಳನ್ನೇರ್ಪಡಿಸಲು ಕನಿಷ್ಠ 8ತಂಡಗಳು ಇರಬೇಕು, ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯುಕ್ತಿಕ ಹಾಗೂ ಒಂದು ಗುಂಪು ಸ್ಫರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
ಆಸಕ್ತ ಕ್ರೀಡಾಪಟುಗಳು ಆಯಾ ದಿನಾಂಕಗಳಂದು ಆಯಾ ತಾಲೂಕಿನ ಕ್ರೀಡಾಂಗಣದಲ್ಲಿ ಬೆಳಗ್ಗೆ 10:00 ಗಂಟೆಯೊಳಗಾಗಿ ಹಾಜರಿದ್ದು, ಸಂಬಂಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರು ನೊಂದಾಯಿಸಿಕೊಳ್ಳುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...