Sunday, December 14, 2025
Sunday, December 14, 2025

Kateel Ashok Pai Memorial College ಶಿಕ್ಷಣ ವ್ಯಾಪಾರವಾಗದೇ ಸಮಾಜದ ಬದಲಾವಣೆಗೆ ಪೂರಕವಾಗಬೇಕು-ಡಾ.ಜಿ.ಬಿ.ಚಂದ್ರಶೇಖರ್

Date:

Kateel Ashok Pai Memorial College ಜ್ಞಾನ ಎನ್ನುವುದು ಕಾಲೇಜಿನ ನಾಲ್ಕು ಗೋಡೆಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳು ಜ್ಞಾನದ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಜಿ. ಬಿ. ಅವರು ಅಭಿಪ್ರಾಯಪಟ್ಟರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವತಿಯಿಂದ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಮತ್ತು ಕಾಲೇಜಿನ ಎಲ್ಲಾ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಟೀಲ್ ಅಶೋಕ್ ಪೈ ಕಾಲೇಜು ಹಲವಾರು ಸಾಧನೆಯ ಹಾದಿಗೆ ತಳಹದಿಯಾಗಿದೆ. ಯಾವುದೇ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವುದು ಸುಲಭವಲ್ಲ.. ವಿದ್ಯಾರ್ಥಿಗಳ ಪರಿಶ್ರಮದಿಂದ ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳು ಹರಿದು ಬಂದಿರುವುದು ಸಂತಸ ಎಂದರು.

ಬೇರೆ ಎಲ್ಲಾ ಕ್ಷೇತ್ರಗಳಿಗಿಂತ ಆರೋಗ್ಯ ಕ್ಷೇತ್ರ ವಿಭಿನ್ನ. ಕೋವಿಡ್ ಸಾಂಕ್ರಾಮಿಕ ರೋಗ ಹಲವಾರು ಪಾಠಗಳನ್ನು ಕಲಿಸಿದೆ. ದಿನ ಕಳೆದಂತೆ ತಂತ್ರಜ್ಞಾನ ಬೆಳೆಯುತ್ತಿದೆ. ಇತ್ತೀಚೆಗೆ ದಿನಗಳಲ್ಲಿ ಶಿಕ್ಷಣ ಎನ್ನುವುದು ವ್ಯಾಪಾರವಾಗಿದೆ. ಶಿಕ್ಷಣ ಸಮಾಜದ ಬದಲಾವಣೆಗೆ ಪೂರಕವಾಗಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್ ಅವರು ಮಾತನಾಡಿ, ವೈದ್ಯರು ಹಾಗೂ ಶಿಕ್ಷಕರಿಗೆ ವಿದ್ಯಾರ್ಥಿಗಳು ಚಿರಖುಣಿಯಾಗಿರಬೇಕು. ಪ್ರತಿ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಬಹುಮುಖ್ಯ .
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ಮಾತನಾಡಿ, ಸಮಾರೋಪ ಸಮಾರಂಭ ಒಂದು ಹಬ್ಬ ಇದ್ದಂತೆ. ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಮಾನಸ ಟ್ರಸ್ಟ್ ಹಲವಾರು ಮಾರ್ಗಗಳನ್ನು ನಿರ್ಮಿಸಿಕೊಟ್ಟಿದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಈ ವರ್ಷ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ರ್ಯಾಂಕ್ ಪಡೆದಿರುವುದು ವಿಶೇಷ ಎಂದರು.

ಬರೀ ರ್ಯಾಂಕ್ ಒಂದೇ ಮಾನದಂಡವಲ್ಲ. ಅದಲ್ಲದೇ ವಿದ್ಯಾರ್ಥಿಗಳು ಸಾಮಾಜಿಕವಾಗಿ ತಮ್ಮನ್ನು ತಾವು ಒರೆಗೆ ಹಚ್ಚುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Kateel Ashok Pai Memorial College ಕಾರ್ಯಕ್ರಮದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ರಾಜೇಂದ್ರ ಚೆನ್ನಿ, ಮಾನಸ ಟ್ರಸ್ಟ್ ನಿರ್ದೇಶಕರಾದ ಡಾ. ರಜನಿ ಎ.ಪೈ. ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ನಿರ್ದೇಶಕಿಯಾದ ಡಾ. ಪ್ರೀತಿ ವಿ. ಶಾನಭಾಗ್ , ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಮಂಜುನಾಥ ಸ್ವಾಮಿ,
ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಡಾ. ಸುಕೀರ್ತಿ, ಶ್ರೀ ರಾಬರ್ಟ್ ರಾಯಪ್ಪ, ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅರ್ಚನಾ ಭಟ್, ಕಾಲೇಜಿನ ಉಪನ್ಯಾಸಕ ವೃಂದ, ಸಿಬ್ಬಂದಿಗಳು , ವಿದ್ಯಾರ್ಥಿಗಳು
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...