Government Of Karnataka ಮಹಾತ್ಮಾ ಗಾಂಧಿಯವರು ಮಹಿಳಾ ಸ್ವಾತಂತ್ರ್ಯಕ್ಕೆ ಅನನ್ಯವಾದ ಪ್ರಾಶಸ್ತ್ಯ ನೀಡಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ.
ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ.
ಶಕ್ತಿ ಯೋಜನೆ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಸಲು ಅವಕಾಶ ಕಲ್ಪಿಸಿದೆ. ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯಿಂದ ಓದುವ ಹೆಣ್ಣು ಮಕ್ಕಳ ಕನಸುಗಳಿಗೆ ರೆಕ್ಕೆ ಮೂಡಿದಂತಾಗಿದೆ.
ಸರ್ಕಾರದ ಶಕ್ತಿ ಯೋಜನೆಗೆ ಅಭೂತಪೂರ್ವವಾದ ಪ್ರತಿಕ್ರಿಯೆ ಮತ್ತು ಸಕಾರಾತ್ಮಕ ಸ್ಪಂದನೆ ದೊರಕಿದೆ. ಮಹಿಳೆಯರು ದೂರದ ಪಟ್ಟಣಗಳಿಗೆ ತೆರಳಿ ಹೆಚ್ಚಿನ ಆದಾಯದ ಉದ್ಯೋಗ ಹೊಂದಲು ಸಹಕಾರಿಯಾಗಿದೆ.
ಈ ಯೋಜನೆಯಡಿಯಲ್ಲಿ ಮಹಿಳೆಯರು ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಎಂದೂ ಮನೆಯಿಂದ ಹೊರಬರದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಂತಾಗಿದ್ದು, ದೇವಾಲಯಗಳಿಗೆ ಪ್ರಯಾಣ ಸುವವರ ಸಂಖ್ಯೆ ಹೆಚ್ಚಿದೆ. ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಪ್ರಯಾಣ ವೆಚ್ಚದ ಉಳಿತಾಯದಿಂದ ಮಹಿಳೆಯರಿಗೆ ದೈನಂದಿನ ಬದುಕಿನಲ್ಲಿ ಮತ್ತಷ್ಟು ಬಲ ತುಂಬಿದ್ದು, ಹೆಚ್ಚಿನ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
Government Of Karnataka ಜೂನ್ ೧೧ ರಿಂದ ಶಕ್ತಿ ಯೋಜನೆ ಜಾರಿಗೆ ಬಂದಿದ್ದು, ಈ ಮಾಹೆಯಲ್ಲಿ ಶಿವಮೊಗ್ಗ ವಿಭಾಗದಲ್ಲಿ ಒಟ್ಟು ೧೨೩೯೬೬೧ ಮಹಿಳೆಯರು ಉಚಿತವಾಗಿ ಪ್ರಯಾಣ ಸಿದ್ದು ರೂ.೪೨೫೩೫೭೪೩ ವೆಚ್ಚವನ್ನು ಸರ್ಕಾರ ಭರಿಸಲಿದೆ. ಜುಲೈ ಮಾಹೆಯಲ್ಲಿ ೨೪೦೧೧೪೬ ಮಹಿಳೆಯರು ಉಚಿತವಾಗಿ ಪ್ರಯಾಣ ಸಿದ್ದಾರೆ. ಸದರಿ ಮಾಹೆ ವೆಚ್ಚ ೭೬೨೭೯೧೬೫ ಆಗಿರುತ್ತದೆ. ಆಗಸ್ಟ್ ೨೨ ರವರೆಗೆ ೧೬೬೪೩೩೦ ಮಹಿಳಾ ಪ್ರಯಾಣ ಕರು ಪ್ರಯಾಣ ಸಿದ್ದು
ರೂ. ೫೪೬೨೬೦೧೫ ವೆಚ್ಚ ಸೇರಿದಂತೆ ಒಟ್ಟಾರೆ ಜುಲೈ ೧೧ ರಿಂದ ಆಗಸ್ಟ್ ೨೨ ರವರೆಗೆ ೫೩೦೫೧೩೭ ಮಹಿಳಾ ಪ್ರಯಾಣ ಕರು ಪ್ರಯಾಣ ಮಾಡಿರುತ್ತಾರೆ.
ಒಟ್ಟು ರೂ.೧೭೩೪೪೦೯೨೩ ವೆಚ್ಚವಾಗಿದ್ದು, ಸರ್ಕಾರ ನಿಗಮಕ್ಕೆ ಭರಿಸಲಿದೆ ಎಂದರು.
ಯೋಜನೆ ಅನುಷ್ಟಾನದ ನಂತರ ನೂಕು ನುಗ್ಗಲು ತಪ್ಪಿಸಲು, ಅಹಿತಕರ ಘಟನೆಗಳು ನಡೆಯದಂತೆ ಸೂಪರ್‌ವೈಸರ್‌ಗಳನ್ನು ನಿಯೋಜಿಸಿ ಕ್ರಮ ವಹಿಸಲಾಗಿದೆ. ವಿಶೇಷಜಾತ್ರೆ/ಹಬ್ಬವಿರುವ ದಿನಗಳನ್ನು ಗುರುತಿಸಿ ಪ್ರಯಾಣ ಕರ ಸಂದಣ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಕೆಎಸ್‌ಆರ್‌ಟಿಸಿ, ವಿಭಾಗದ ವಿಭಾಗೀಯ ನಿಯಂತ್ರಕರಾದ ವಿಜಯಕುಮಾರ್ ಅವರು ತಿಳಿಸಿದ್ದಾರೆ.
ಪ್ರಯೋಜನ ಹೀಗೆ ಪಡೆಯಿರಿ : ಮಹಿಳಾ ಪ್ರಯಾಣ ಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ಶಕ್ತಿ ಸ್ಮಾಟ
ರ್ಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ಗಳಿಗಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಮಾರ್ಟ್ ಕಾರ್ಡ್ ಪಡೆಯುವ ತನಕ ಪ್ರಯಾಣ ಸುವ ಸಂದರ್ಭದಲ್ಲಿ ಆಧಾರ್‌ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣ ಸಬಹುದು. ಮಹಿಳಾ ಪ್ರಯಾಣ ಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು.
ರಾಜ್ಯದ ಒಳಗೆ ಪ್ರಯಾಣ ಸಲು ಮಾತ್ರ ಅನ್ವಯ. ಅಂತರ ರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್ ವಿತರಣೆಗಾಗಿ ಅಗತ್ಯ ಮಾರ್ಪಾಡು, ಸಿಬ್ಬಂದಿಗೆ ಸೂಕ್ತ ತರಬೇತಿ. ಗುರುತಿನ ಚೀಟಿ ಪರಿಶೀಲಿಸಿ ಶೂನ್ಯ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಮುಂಗಡ ಬುಕಿಂಗ್ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವಿದೆ.
ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಇಟಿಎಂ ಗಳಿಂದ ವಿತರಿಸಲಾದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ನಿಗಮಗಳಿಗೆ ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತದೆ.
ಪುರುಷ ಪ್ರಯಾಣ ಕರಿಗೆ ಆಸನ ಮೀಸಲು : ಕೆಎಸ್‌ಆರ್‌ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ(ಅಂತರರಾಜ್ಯ, ಎಸಿ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗುವುದು.