National Film Award ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ.
ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 ಚಿತ್ರಕ್ಕೆ ದೊರೆತಿದೆ.
ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ಪ್ರಶಸ್ತಿಯು ಪಾಲಾಗಿದೆ. ಉಳಿದಂತೆ ಪ್ರಶಸ್ತಿಗಳು ಘೋಷಣೆ ಆಗುತ್ತಿವೆ.
ಭಾರತದಲ್ಲಿ ತಯಾರಾಗುವ ಅಷ್ಟೂ ಸಿನಿಮಾಗಳೂ ಈ ಸ್ಪರ್ಧೆಗೆ ಸ್ಪರ್ಧಿಸಬಹುದಾಗಿದ್ದು, ಜೊತೆಗೆ ಪ್ರಾದೇಶಿಕ ಸಿನಿಮಾಗಳಿಗೂ ಪ್ರತ್ಯೇಕವಾಗಿ ಪ್ರಶಸ್ತಿಗಳು ಮೀಸಲಿವೆ.
ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ ಪ್ರಶಸ್ತಿ ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.
National Film Award ಅಲ್ಲು ಅರ್ಜುನ್ ಅತ್ಯುತ್ತಮ ನಟ: ಆರ್.ಮಾಧವನ್ ನಿರ್ದೇಶಿಸಿರುವ ರಾಕೆಟ್ರಿ ದಿ ನಟಿಸಿ, ನಂಬಿ ಎಫೆಕ್ಟ್ ಅತ್ಯುತ್ತಮ ಫೀಚರ್ ಫಿಲ್ಮ ಪ್ರಶಸ್ತಿ ಪಡೆದಿದೆ.
‘ಪುಷ್ಪ’ ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ‘ಗ೦ಗೂ ಬಾಯಿ ಕಾರಿ ಯಾ ವಾಡಿ ಚಿತ್ರದಲ್ಲಿನ ನಟನೆಗಾಗಿ ಆಲಿಯಾ ಭಟ್ ಹಾಗೂ ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸೆನನ್ ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ > ಫೈಲ್ಸ್’ ರಾಷ್ಟ್ರೀಯ ಭಾವೈಕ್ಯ ಸಾರುವ 1 ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ.