Thammadikoppa School ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.
ಈ ಶಾಲೆಯಲ್ಲಿ ಒಟ್ಟು 59 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದು
ಕಳೆದ ಹಲವಾರು ತಿಂಗಳುಗಳಿಂದ ಮುಖ್ಯ ಶಿಕ್ಷಕರಾದ ಗಂಗನಾಯ್ಕ್ ಅನಧಿಕೃತವಾಗಿ ಸತತ ಗೈರು ಹಾಜರಾಗುತಿದ್ದು ಶಾಲೆಯ ಶೈಕ್ಷಣಿಕ ಪ್ರಗತಿ ಕುಠಿತವಾಗುತ್ತಿದೆ ಎಂದು ಪೋಷಕರ ಹಾಗೂ ಗ್ರಾಮಸ್ಥರ ಆರೋಪವಾಗಿತ್ತು.
ಈ ಹಿನ್ನಲೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಪೋಷಕರು ಹಾಗೂ ಸಾರ್ವಜನಿಕರು ಇಂದು ದಿಡೀರ್ ಪ್ರತಿಭಟನೆ ನಡೆಸಿ ಮುಖ್ಯ ಶಿಕ್ಷಕರ ಕಛೇರಿಯ ಕೊಠಡಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Thammadikoppa School ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಪ್ರತಿಭಟನಾಕಾರರ ಮನವಿಯನ್ನು ಆಲಿಸಿ ತತ್ತಕ್ಷಣ ಮುಖ್ಯೋಪಾಧ್ಯಾಯರನ್ನು ವರ್ಗಾಯಿಸಲು ಕಾನೂನು ತೊಡಕು ಇರುವುದರಿಂದ ಅವರ ಸ್ಥಾನಕ್ಕೆ ಶಾಲೆಗೆ ನೂತನ ಶಿಕ್ಷಕರನ್ನು ನೇಮಿಸುವ ಭರವಸೆ ನೀಡಿದರು.
ಶಿಕ್ಷಣಾಧಿಕಾರಿಗಳ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಇದ್ದರು