CM Siddharamaih ಚುನಾವಣೆಪೂರ್ವದಲ್ಲಿ ಐದು ಗ್ಯಾರಂಟಿಗಳ ಭರವಸೆ ನೀಡಿ ಬಳಿಕ ಭರ್ಜರಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಉಚಿತ ಯೋಜನೆ ಸಂಬಂಧ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದೆ.
ಇದೀಗ ಉಚಿತ ಯೋಜನೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸಣ್ಣ ನೇಕಾರರಿಗೆ 10 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಿಎಂ ನಿರ್ಣಯ ಪ್ರಕಟಿಸಿದರು.