Grilahakshmi Yojana ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾನು ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ. ಕರ್ನಾಟಕದ ಜನರು ಇದನ್ನು ಸ್ವಾಗತಿಸುತ್ತಿದ್ದಾರೆ. ಬಡವರ ಪರವಾದ ಈ ಯೋಜನೆಗಳನ್ನ ಕೆಲವರು ರಾಜಕೀಯಕ್ಕಾಗಿ ಟೀಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
Grilahakshmi Yojana ರಾಜ್ಯದ 1.10 ಕೋಟಿ ಫಲಾನುಭವಿಗಳ ಖಾತೆಗೆ ಒಮ್ಮೆಗೆ ಹಣ ಜಮಾ ಮಾಡುವ ಮೂಲಕ ರಾಹುಲ್ ಗಾಂಧಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.