Thursday, March 19, 2026
Thursday, March 19, 2026

Friends Center Shivamogga ಸಂಸ್ಥೆಯ ಆಸ್ತಿಯೆಂದರೆ ಕಟ್ಟಡವಲ್ಲ ಸದಸ್ಯ ಸಂಪತ್ತು

Date:

Friends Center Shivamogga ಒಂದು ಕಾಲದಲ್ಲಿ ಉತ್ತುಂಗ ಸ್ಥಿತಿಯಲ್ಲಿದ್ದ ಶಿವಮೊಗ್ಗದ ಹೆಮ್ಮೆಯ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಹಿಂದಿನ ವೈಭವ ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಎಲ್ಲ ಸದಸ್ಯರೂ ಕೈಜೋಡಿಸಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಹೇಳಿದ್ದಾರೆ.

ಅವರು 27ರಂದು ನಡೆದ ಐವತ್ತೇಳನೇ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಅವರು ಮುಂದುವರೆದು ಜಿ.ಪಿ.ರಾಜರತ್ನಂ ಅವರು ತಿಳಿಸಿದ ಜೀವನದ ಐದು ತತ್ವಗಳನ್ನು ಎಲ್ಲರೂ ಪಾಲಿಸಿದಲ್ಲಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ಸೋದಾಹರಣವಾಗಿ ತಿಳಿಸಿದರು. ಅಲ್ಲದೆ ಒಂದು ಸಂಸ್ಥೆಯ ಆಸ್ತಿಯೆಂದರೆ ಕಟ್ಟಡವಲ್ಲ ಬದಲಾಗಿ ಸದಸ್ಯ ಸಂಪತ್ತು ಎಂದು ತಿಳಿಸಿ ಎಲ್ಲ ಸದಸ್ಯರೂ ತಮ್ಮ ಸಂಸ್ಥೆಯ ಕಾರ್ಯ ಚಟುವಟಿಕೆಗಳಲ್ಲಿ ಕ್ರಿಯಾ ಶೀಲರಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

Friends Center Shivamogga ಇದುವರೆಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ನಿರ್ಗಮಿತರಾದ ವಿ.ನಾಗರಾಜ್ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ನೂತನ ಅಧ್ಯಕ್ಷ ಹೆಚ್.ಕೆ.ಲೋಕೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ಸಂದರ್ಭದಲ್ಲಿ ಟಿ.ಆರ್ .ಅಶ್ವತ್ಥನಾರಾಯಣ, ಟಿ.ಆರ್.ವೆಂಕಟೇಶ ಮೂರ್ತಿ, ಶಶಿಧರ್, ಡಾ.ಜೋಯಿಸ್, ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ನಿರ್ಗಮಿತ ಕಾರ್ಯದರ್ಶಿ ಗೋಪಾಲ ಕೃಷ್ಣ ಅವರು ಸ್ವಾಗತಿಸಿದರು.

ನೂತನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾನೂರ ಅವರು ವಂದಿಸಿದರು. ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ನೂತನ ಅಧ್ಯಕ್ಷರಾಗಿ ಸುನೀತಾ ಮೋಹನ್ ಅವರು ಅಧಿಕಾರ ವಹಿಸಿಕೊಂಡರು.

ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...