DSS Chikkamagaluru ಮಕ್ಕಳ ಸಹಾಯವಾಣಿ ಘಟಕಕ್ಕೆ ನಿಯಮಬಾಹಿರವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿರುವುದನ್ನು ತಡೆಹಿಡಿದು ನೇಮಕಾತಿ ಪ್ರಕ್ರಿಯೆಯನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ದಸಂಸ (ಅಂಬೇಡ್ಕರ್ ವಾದ) ಮುಖಂಡರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದ ಮುಖಂಡರುಗಳು ಸಹಾಯವಾಣಿ -1098 ಘಟಕಕ್ಕೆ ಅರ್ಹತೆ ಇರುವವರನ್ನು ಪರಿಗಣಿಸಿ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳ ಸಹಾಯವಾಣ ಘಟಕವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದೊಂದಿಗೆ ವಿಲೀನಗೊ ಳಿಸಲು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಕೇಂದ್ರ ಸರ್ಕಾರವು ಈಗಾಗಲೇ ಮಕ್ಕಳ ಸಹಾಯವಾಣಿ ಕೇಂದ್ರ ದಲ್ಲಿ ಕಾರ್ಯನಿರ್ವಹಿಸಿರುವ ವಿದ್ಯಾರ್ಹತೆ ಪರಿಗಣಿಸಿ ನೇಮಕಾತಿಯಲ್ಲಿ ಆದ್ಯತೆ ನೀಡುವಂತೆ ತಿಳಿಸಲಾಗಿದ್ದು ನಮ್ಮ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣ ಸಂಯೋಜಕರ ಹುದ್ದೆಯನ್ನು ನೇಮಿಸಿಕೊಳ್ಳುವಾಗ ನಿಯಮಗಳನ್ನು ಗಾಳಿಗೆ ತೂರಿ ಅನುಭವವೇ ಇಲ್ಲದಂತಹ ಅಭ್ಯರ್ಥಿಗಳನ್ನು ಪ್ರಭಾವಕ್ಕೆ ಒಳಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಇದಲ್ಲದೇ ಕೆಲ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಸೇವಾ ಅನುಭವ ಇಲ್ಲದಿದ್ದರೂ ಆಯ್ಕೆ ಮಾಡಿಕೊಳ್ಳಲಾಗಿದೆ. ಆಯ್ಕೆ ವಿವರಗಳನ್ನು ಯಾವುದೇ ಸೂಚನಾ ಫಲಕದಲ್ಲಿ ಪ್ರಕಟಿಸಿರುವುದಿಲ್ಲ. ಎಲ್ಲಾ ಮಾಹಿತಿಯನ್ನು ಗೌಪ್ಯ ವಾಗಿ ನಿರ್ವಹಿಸಿ ಸಿಬ್ಬಂದಿಗಳನ್ನು ಆಯ್ಕೆಗೊಳಿಸಿ ತರಬೇತಿಗೆ ನಿಯೋಜಿಸಿರುವುದು ಕಂಡಬಂದಿರುತ್ತದೆ ಎಂದರು.
DSS Chikkamagaluru ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸಿಬ್ಬಂದಿಗಳ ಆಯ್ಕೆ ಕುರಿತು ವಿಚಾರಿಸಿದರೆ ನೇಮಕಾತಿ ಕುರಿತು ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಿರುವುದಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳ ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹಾಗೂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಅರ್ಹತೆ ಇರುವ ಫಲಾನು ಭವಿಗಳನ್ನು ಪರಿಗಣಿಸಿ ನೇಮಕಾತಿಯನ್ನು ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಯನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಘಟನಾ ಸಂಚಾಲಕ ಸುಜೇಂದ್ರ ಲಕ್ಯಾ, ಮುಖಂಡರುಗಳಾ ರವಿಪ್ರಕಾಶ್, ಗುರುಮರ್ತಿ, ಫಲಾನುಭವಿಗಳಾದ ಎಂ.ಎಂ.ಪ್ರದೀಪ್, ಮಘರಾಜ್ ನಾಯಕ್, ಹೆಚ್.ಎಸ್.ಮಧು ಹಾಜರಿದ್ದರು.