Saturday, November 23, 2024
Saturday, November 23, 2024

Nature Conservation Trust ಕಣ್ಣಿನ ಚಿಕಿತ್ಸೆ ಸೂಕ್ತ ಸಮಯದಲ್ಲಿ ಕೊಡಿಸದೇ ಇದ್ದರೆ ಅಂಧತ್ವಕ್ಕೆ ಆಹ್ವಾನ- ಡಾ .ಸುಂದರಗೌಡ

Date:

Nature Conservation Trust ಕಣ್ಣಿನ ಪೊರೆಗಳಿಗೆ ಚಿಕಿತ್ಸೆ ನೀಡಬಹುದಾದರೂ, ಸೂಕ್ತ ಸಮಯದಲ್ಲಿ ತಪಾಸಣೆ ನಡೆಸದೇ ನಿರ್ಲಕ್ಷ್ಯತನವಹಿಸಿದರೆ ಸಂಪೂರ್ಣವಾಗಿ ಕುರುಡುತನ ಆವರಿಸಬಹುದು ಎಂದು ಬಿಕ್ಕೆಮನೆ ನೇಚರ್ ಕನ್ಸರ್ ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಸುಂದರಗೌಡ ಹೇಳಿದರು.

ಚಿಕ್ಕಮಗಳೂರು ಪಟ್ಟಣದ ಅಮೃತಾಪುರ ಗ್ರಾಮದ ಶ್ರೀ ಅಮೃತೇಶ್ವರಸ್ವಾಮಿ ನಿತ್ಯ ದಾಸೋಹ ಭವನದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇಚರ್ ಕನ್ಸರ್‌ವೇಷನ್ ಟ್ರಸ್ಟ್, ಶ್ರೀಗಂಗಧ ಮತ್ತು ವನಕೃಷಿ ಬೆಳೆಗಾರರ ಸಂಘ ಹಾಗೂ ಆಯುರ್ವೇದ ಔಷಧಿಯ ಸಸ್ಯ ಅಭಿವೃದ್ದಿ ಸಂಘ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕು ಎಂದರು.

ದೃಷ್ಟಿಯನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯ ವಂತರಾದರೆ ನಾವು ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಆರ್ಥಿಕವಾಗಿ ಹಿಂದುಳಿ ದವರಿಗಾಗಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದರು.

ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

Nature Conservation Trust ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಎ.ಎಸ್.ಈಶ್ವರಪ್ಪ ಮಾತನಾಡಿ ಆರೋಗ್ಯ ಶಿಬಿರವು ಅಮೃತಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಿದೆ. ಇಂತಹ ಶಿಬಿರಗಳ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ನಡೆಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ವಿವಿಧ ಆರೋಗ್ಯ ಶಿಬಿರದಲ್ಲಿ ಸುಮಾರು 110ಕ್ಕೂ ಹೆಚ್ಚು ಮಂದಿ ತಪಾಸಣೆಯಲ್ಲಿ ಭಾಗವಹಿ ಸಿದ್ದು 09 ಮಂದಿಗೆ ಕಣ್ಣಿ ಚಿಕಿತ್ಸೆಗಾಗಿ ಉಡುಪಿ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

10 ಮಂದಿಗೆ ಸಣ್ಣಮಟ್ಟಿನ ಕನ್ನಡ ಸಮಸ್ಯೆಯಿದ್ದ ಹಿನ್ನೆಲೆಯಲ್ಲಿ ಉಚಿತವಾಗಿ ಕನ್ನಡಕ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಮೃತೇಶ್ವರಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷ ಎ.ವಿ.ಶೇಖರಪ್ಪ, ನಿವೃತ್ತ ಶಿಕ್ಷಕ ಸಿದ್ದರಾಮಪ್ಪ, ನೇರಲಕೆರೆ ಚಿಟ್ಟಕ್ಕಿ ಜಿ.ಬಸಪ್ಪ, ಶಶಿಧರ್ ಅರವಿನಮನೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...