Wednesday, October 2, 2024
Wednesday, October 2, 2024

District Health and Family Welfare Department ಜನತೆಯಲ್ಲಿ ಆರೋಗ್ಯದ ಅರಿವು ಮೂಡಿಸುವ ಬಗ್ಗೆ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನ

Date:

District Health and Family Welfare Department ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಮಾಧ್ಯಮದಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯವಿರುವ ಅರ್ಹ ಕಲಾತಂಡಗಳ ಆಯ್ಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕಲಾತಂಡ ಮತ್ತು ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಲಾತಂಡದಲ್ಲಿ ಕನಿಷ್ಠ 6-8 ಜನ ಕಲಾವಿದರಿರಬೇಕು ಮತ್ತು ಎಲ್ಲಾ ಕಲಾವಿದರು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಕಲಾತಂಡ ನೋಂದಣ ಹಾಗೂ ನವೀಕರಣದ ಪ್ರತಿಯೊಂದಿಗೆ ವಿವರವಾದ ಮಾಹಿತಿಯನ್ನು ಸೆ.05 ರೊಳಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗಕ್ಕೆ ಸಲ್ಲಿಸಬೇಕು.

District Health and Family Welfare Department ಆಸಕ್ತ ಕಲಾತಂಡಗಳು ಸೆ.12 ರಂದು ಬೆಳಗ್ಗೆ 11:00ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯ್ಕೆ ಸಮಿತಿ ಮುಂದೆ ತಮ್ಮ ಕಲಾ ಪ್ರದರ್ಶನ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆರೋಗ್ಯಾಧಿಕಾರಿಗಳ ಕಚೇರಿಯ ಐ.ಇ.ಸಿ. ವಿಭಾಗ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...