Gruhalakshmi Yojana ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅದ್ದೂರಿ ಚಾಲನೆ ದೊರೆಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಶೇಷ ಅತಿಥಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲೆಯ ವಿವಿಧ ಗ್ರಾಮಗಳ ಫಲಾನುಭವಿಗಳಾದ ಆಶಾ, ಅನಿತಾ, ಅಶ್ವಿನಿ, ದೊಡ್ಡ ಮಹದೇವಮ್ಮ, ಮೋಹಸಿನ್ ತಾಜ್ ಸೇರಿದಂತೆ ಇನ್ನೂ ಅನೇಕರು ಕ್ಯೂಆರ್ ಕೋಡ್ ಮತ್ತು ಟ್ಯಾಕ್ಸ್ ಸಹಿತ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆದು ಸಂಭ್ರಮಿಸಿದರು.
ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯೇನೂ ಆಗಿಲ್ಲ. ಇತರ ಕಾರ್ಯಕ್ರಮಗಳಿಗೂ ಅನುದಾನ ಒದಗಿಸುತ್ತಿದ್ದೇವೆ. ಸತ್ಯ ಈಗ ನಿಮ್ಮೆಲ್ಲರ ಎದುರಿಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
Gruhalakshmi Yojana ರಕ್ಷಾ ಬಂಧನ ದ ದಿನವೇ ನಾಡಿನ ಕೋಟ್ಯಾಂತರ ಅಕ್ಕ ತಂಗಿಯರಿಗೆ ಎಂದು ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ದೊಂದಿಗೆ ಇಂದಿರಾ ಗಾಂಧಿಯವರ ಕಾಲದ ವೈಭವ ಮರುಸೃಷ್ಟಿಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
ಬಿಜೆಪಿಯು ದೇಶವನ್ನು ಹಾಳು ಮಾಡುತ್ತಿದೆ. ಕೇಂದ್ರದಲ್ಲಿರುವ ಪ್ಯಾಸಿಸ್ಟ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ಕಾಂಗ್ರೆಸ್ ದೇಶವನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿಯು ವಿಭಜಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ. ದೇಶದಲ್ಲಿ ಯಾವ ಸರ್ಕಾರವೂ ಇಂತಹ ಗ್ಯಾರೆಂಟಿಗಳನ್ನು ಕೊಟ್ಟಿಲ್ಲ . ಎಲ್ಲರೂ ಕರ್ನಾಟಕದತ್ತ ನೋಡುತ್ತಿದ್ದಾರೆ ಎಂದರು.