Sunday, June 22, 2025
Sunday, June 22, 2025

Gruha Lakshmi Scheme ಕುಟುಂಬದ ಆರ್ಥಿಕ ಸದೃಢತೆಗೆ “ಗೃಹಲಕ್ಷ್ಮಿ” ಭರವಸೆ-ಎ.ಎನ್.ಮಹೇಶ್

Date:

Gruha Lakshmi Scheme ರಾಜ್ಯಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದು ಕುಟುಂ ಬದ ಪ್ರತಿ ಯಜಮಾನಿಗೆ ಎರಡು ಸಾವಿರ ವಿತರಿಸುವ ಮೂಲಕ ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು ಇವರ ವತಿಯಿಂದ ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಯೋಜನೆಯ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರ ಗೃಹ ಲಕ್ಷ್ಮೀ ಯೋಜನೆಯನ್ನು ರೂಪಿಸಿದ್ದು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದಂತಹ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು ಅದರಂತೆ ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ ಸೇರಿದಂತೆ ಇದೀಗ ಗೃಹಲಕ್ಷ್ಮೀ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದರು.

ರಾಜ್ಯಸರ್ಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಇದರಿಂದ ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಎರಡು ಸಾವಿರ ಪ್ರತಿ ತಿಂಗಳು ರೂ. ಜಮಾ ಆಗಲಿದ್ದು ಇದನ್ನು ಅನುಷ್ಟಾನ ಮಾಡುವ ಸಂ ಬಂಧ ಏತಕ್ಕಾಗಿ ಹಣವನ್ನು ನೀಡಲಾಗಿದೆ ಎಂಬ ಮಾತುಗಳಿದ್ದ ಸಂದರ್ಭದಲ್ಲಿ ದಿನನಿತ್ಯ ಬೆಲೆಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ಕೈಗೊಳ್ಳಲಾಗಿದೆ ಎಂದರು.

ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಮಾಸ್ತೇಗೌಡ ಮಾತನಾಡಿ ರಾಜ್ಯಸರ್ಕಾರವು ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು ಇದರಿಂದ ಕುಟುಂಬದ ಪ್ರತಿ ಫಲಾನುಭವಿಯು ಸಂಸಾರದ ನಿರ್ವಹಣೆ ಮಾಡಲು ಬಹಳಷ್ಟು ಅನುಕೂಲವಾಗಲಿದೆ. ಪಂಚಾಯಿತಿ ವ್ಯಾಪ್ತಿಯ ಮಹಿಳೆಯರು ಯೋಜನೆಯ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

Gruha Lakshmi Scheme ರಾಜ್ಯಸರ್ಕಾರದ ಈ ಯೋಜನೆಯಿಂದ ಮಹಿಳೆಯರಿಗೆ ಜೀವನವು ಸುಗಮವಾಗಲಿದ್ದು ಯಾವ ರೀತಿಯಲ್ಲಿ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಮಂಜೇಗೌಡ, ಸದಸ್ಯರಾದ ಲಲಿತಾ ಶಿವಾನಂದ, ಯಶವಂತ್ ರಾಜ್ ಅರಸ್, ಮುಳ್ಳೇಗೌಡ, ಜಯಂತಿ ನಾಗರಾಜ್, ಸ್ವಪ್ನ ಚಂದ್ರಶೇಖರ್, ಕವಿತಾ ಶಿವರಾಂ, ಹೆಚ್.ಎಂ.ಮoಜೇ ಗೌಡ, ಪಿಡಿಓ ಲಕ್ಷ್ಮಣ ಶಾಲಾ ಶಿಕ್ಷಕಿ ರಮ್ಯ, ಶಿಕ್ಷಕ ರಂಗನಾಥ್ ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...