Children’s Scholarship ಕಾರ್ಮಿಕ ಇಲಾಖೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳ ಮಕ್ಕಳಿಗೆ ಸರ್ಕಾರದಿಂದ ದೊರೆಯುವ ವಿದ್ಯಾರ್ಥಿ ವೇತನವನ್ನು ಸೂಕ್ತ ಸಮಯದಲ್ಲಿ ಒದಗಿಸಿಕೊಡುವ ಮೂಲಕ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಕಟ್ಟಡ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ವಸಂತ್ ಕುಮಾರ್ ಒತ್ತಾಯಿಸಿದರು.
ಚಿಕ್ಕಮಗಳೂರು ನಗರದ ರಂಗಣ್ಣ ಕಲ್ಯಾಣ ಮಂಟಪದಲ್ಲಿ ಬುಧವಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ 8ನೇ ವರ್ಷದ ಸಾಮಾನ್ಯ ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ದೊರೆತಿರುವುದಿಲ್ಲ. ಈ ಬಗ್ಗೆ ಸಂಬ0ಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿ ದರು.
ಮಕ್ಕಳ ವಿದ್ಯಾರ್ಥಿ ವೇತನ ಸಂಬ0ಧ ಆ.31 ರಂದು ಖಾತೆಗೆ ಜಮಾವಣೆಯಾಗಿದ್ದ ವೇತನ ಇದುವರೆಗೂ ಜಮಾವಾಗಿಲ್ಲ. ಜೊತೆಗೆ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಕಲಿಕಾ ಭಾಗ್ಯದ ಶೈಕ್ಷಣಿಕ ಧನಸಹಾಯ ಯೋಜನೆಯಡಿ ಸರ್ಕಾರದಿಂದ ವಿದ್ಯಾರ್ಥಿ ವೇತನವಿದ್ದರೂ ಕಳೆದ ಎರಡು ವರ್ಷಗಳಿಂದ ಪೂರೈಸುತ್ತಿಲ್ಲ ಎಂದು ಹೇಳಿದರು.
ಕಟ್ಟಡ ಕಾರ್ಮಿಕರು ಅಪಘಾತ ಅಥವಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕಾರ್ಮಿಕ ಇಲಾಖೆಯಿಂದ ಆರೋಗ್ಯ ವಿಮೆ ವಿತರಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಇತ್ತೀಚೆಗೆ ಕಟ್ಟಡ ಕಾರ್ಮಿಕ ಆಕಸ್ಮಿಕ ವಾಗಿ ಮೃತವಾಗಿದ್ದು ಅವರ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲೂ 7-8 ತಿಂಗಳು ಕಾಲ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇತ್ತೀಚೆಗೆ ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಕಾರ್ಡ್ದಾರರು ಕಾರ್ಮಿಕರೆಂದು ಸುಳ್ಳು ಹೇಳಿ ಇಲಾಖೆಯ ಸೌಲಭ್ಯವನ್ನು ಪಡೆಯುತ್ತಿದ್ದು ಇದನ್ನು ಕೂಡಲೇ ಗಮನಹರಿಸಬೇಕು. ತಾತ್ಕಾಲಿಕವಾಗಿ ಕಾರ್ಡ್ ನೊಂದಣೀ ಸ್ಥಗಿತಗೊಳಿ, ಪ್ರಸ್ತುತ ನೊಂದಣಿಯಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊ ಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟಗಳ ಮೂಲಕ ಎಚ್ಚರಿಸಬೇಕಾಗುತ್ತದೆ ಎಂದರು.
ಸ0ಘದ ಪ್ರಧಾನ ಕಾರ್ಯದರ್ಶಿ ಎ.ಜಯಕುಮಾರ್ ಮಾತನಾಡಿ ಈಗಾಗಲೇ ಸಂಘದ ಸದಸ್ಯರುಗಳಿಗೆ ತುರ್ತು ಸಂದರ್ಭಗಳಲ್ಲಿ ಅವಘಡಗಳು ಸಂಭವಿಸಿದರೆ ಸಂಘದಿ0ದ ಧನಸಹಾಯ ಹಾಗೂ ಮೃತರಾದ ವೇಳೆಯ ಲ್ಲಿ ಅಂತ್ಯಕ್ರಿಯೆ ವೆಚ್ಚವನ್ನು ಭರಿಸಿ ಸಹಾಯಹಸ್ತ ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಮಿಕರು ಯಾವುದೇ ಒಂದು ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಎದುರಿಸಬೇಕಾದ ಸಂದರ್ಭದಲ್ಲಿ ತ್ವರಿತವಾಗಿ ಹಣವಿರುವುದಿಲ್ಲ. ಕಾರ್ಮಿಕ ಮಂಡಳಿ ಸೂಚಿಸಿರುವ ನಗರದ ಖಾಸಗೀ ಆಸ್ಪತ್ರೆಗಳಲ್ಲಿ ಸಾಲವೆಸಗಿ ಚಿಕಿತ್ಸೆ ಮಾಡಿಸಿಕೊಂಡು ಬಳಿಕ ಇಲಾಖೆಗೆ ವೆಚ್ಚದ ಮಾಹಿತಿ ನೀಡಿದರೂ ಸರಿಯಾದ ಸಮಯಕ್ಕೆ ಹಣ ನೀಡುತ್ತಿಲ್ಲ. ಅದ ಲ್ಲದೇ ಖರ್ಚಿನ ಎಷ್ಟು ಹಣ ಸಂದಾಯವಾಗಲಿದೆ ಎಂಬ ಮಾಹಿತಿ ದೊರಕುತ್ತಿಲ್ಲ ಎಂದರು.
Children’s Scholarship ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಕೂಪ್ಪನ್, ತಾಲ್ಲೂಕು ಉಪಾಧ್ಯಕ್ಷ ಸಿ.ಸಿ.ಮಂಜೇಗೌಡ, ಸಹ ಕಾರ್ಯದರ್ಶಿ ಎಂ.ಎಸ್.ಜಾನಕಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸಲೀಂ, ಸಿ.ಸಿ.ಮಂಜುನಾಥ್, ಸದಸ್ಯರುಗಳಾ ದ ಶ್ರೀನಿವಾಸ್, ಪುಷ್ಪರಾಜ್, ದಾಯಾಕ್ಷಿ, ಮಂಜುಳಾ ಮತ್ತಿತರರು ಹಾಜರಿದ್ದರು.