Thursday, March 19, 2026
Thursday, March 19, 2026

Basava Kendra Shivamogga ಸಮಾನತೆಯ ಸಮಾಜ ನಿರ್ಮಾಣ ಎಲ್ಲರ ಕರ್ತವ್ಯ- ಕೆ.ವಿ.ಜ್ಯೋತಿ ಕುಮಾರಿ

Date:

Basava Kendra Shivamogga ಲಕ್ಷಾಂತರ ಹೋರಾಟಗಾರರ ತ್ಯಾಗ, ಪರಿಶ್ರಮದ ಫಲವಾದ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕಿ ಜ್ಯೋತಿಕುಮಾರಿ ಕೆ.ವಿ. ಹೇಳಿದರು.

ಶಿವಮೊಗ್ಗ ನಗರದ ಬಸವಕೇಂದ್ರದಲ್ಲಿ ಸಮಾನ ಮನಸ್ಕರ ಬಳಗ ಶಿವಮೊಗ್ಗ ಹಾಗೂ ಬಸವ ಕೇಂದ್ರ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯದ ಬೆಳಕಿನಲ್ಲಿ ಸಾಂವಿಧಾನಿಕ ಮೌಲ್ಯಗಳು ವಿಷಯ ಕುರಿತು ಮಾತನಾಡಿದರು.

ಭಾರತ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯ ಪ್ರಮುಖ ಮೌಲ್ಯಗಳಾಗಿದ್ದು, 84 ಮೌಲ್ಯಗಳನ್ನು ಗುರುತಿಸಲಾಗಿದೆ. ಭಾರತದ ಐತಿಹಾಸಿಕ ಹಿನ್ನೆಲೆ ಗಮನಿಸಿದರೆ ಪ್ರತಿಯೊಂದು ಕಾಲ ಘಟ್ಟದಲ್ಲಿಯೂ ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿಬಿಂಬಿಸಿದೆ. ಶ್ರೇಷ್ಠ ಸಂಸ್ಕೃತಿಯು ಎಲ್ಲ ಕಾಲಕ್ಕೂ ಅನ್ವಯಿಸುವಂತಹ ಮೌಲ್ಯಗಳನ್ನು ಕಲಿಸಿದೆ ಎಂದು ತಿಳಿಸಿದರು.

ಬಸವಾದಿ ಶರಣರು ಅನುಭವ ಮಂಟಪದಲ್ಲಿ ಅಂದೋಲನ ರೂಪದಲ್ಲಿ ಜಾತಿ, ಧರ್ಮ ಮೀರಿದ ಸಮಾಜ ನಿರ್ಮಾಣ ಮಾಡಲು ಮೌಲ್ಯಯುತ ಅಂಶಗಳನ್ನು ತಿಳಿಸಿದರು.

ಕಾಯಕ, ದಾಸೋಹ, ಸಾಮಾಜಿಕ ನ್ಯಾಯದ ಮಹತ್ವ ಸಾರಿದರು. ಅತ್ಯಮೂಲ್ಯ ಮೌಲ್ಯಗಳನ್ನು ವಚನ ಸಾಹಿತ್ಯದಲ್ಲಿ ಕಾಣಬಹುದಾಗಿದೆ ಎಂದರು.

ಬಸವ ಕೇಂದ್ರದ ಅಧ್ಯಕ್ಷ ಜಿ.ಬೆನಕಪ್ಪ ಮಾತನಾಡಿ, ಸಮಾನ ಮನಸ್ಕರ ಬಳಗವು ಸಾಹಿತ್ಯ ಚಟುವಟಿಕೆಗಳನ್ನು ಆಯೋಜಿಸುವ ಜತೆಯಲ್ಲಿ ಉತ್ತಮ ವಿಷಯಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಸುತ್ತಿರುವುದು ಅಭಿನಂದನೀಯ ಕಾರ್ಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯ ಹಾಗೂ ಉಪನ್ಯಾಸ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.

ಸಮಾನ ಮನಸ್ಕರ ಬಳಗದ ಚನ್ನಬಸಪ್ಪ ನ್ಯಾಮತಿ ಮಾತನಾಡಿ, ಸಾಹಿತ್ಯ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವ ಉದ್ದೇಶದಿಂದ ಸಮಾನ ಮನಸ್ಕರು ಒಟ್ಟುಗೂಡಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತ್ಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಕ ಸತೀಶ್ ಕೆ., ಮಾಧವ್, ವಾಣಿ ಮತ್ತು ಸಂಗಡಿಗರಿಂದ ಗಾಯನ ಕಾರ್ಯಕ್ರಮ ನಡೆಯಿತು. ನಿವೃತ್ತ ಅಭಿಯಂತರ ಚಂದ್ರಪ್ಪ, Basava Kendra Shivamogga ಸಮಾನ ಮನಸ್ಕರ ಬಳಗದ ಸದಸ್ಯರಾದ ಹಸನ್‌‌ ಬೆಳ್ಳಿಗನೂಡು, ಅನಂತ ಜಿ.ಎಸ್.‌, ಶಿವಕುಮಾರ್‌, ಅಣ್ಣಪ್ಪ ಒಂಟಮಾಳಗಿ, ಬಸವನಗೌಡ, ಸತೀಶ್, ಪಾಲಾಕ್ಷಪ್ಪ,‌ ಪ್ರವೀಣ ಜವಳಿ‌, ಅಣ್ಣಪ್ಪ ಹರಳೇಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...