CM Siddaramaiah ಜಾಗತಿಕವಾಗಿ ಅನಿಲ ಬೆಲೆಯಲ್ಲಿ ಅಪಾರ ಇಳಿಕೆಯಾದಾಗಲೂ ಜನರ ಹಿತಾಸಕ್ತಿಯನ್ನು ರಕ್ಷಿಸದ ಕೇಂದ್ರ ಸರ್ಕಾರ ಬದಲಿಗೆ ತೈಲೋತ್ಪನ್ನ ಕಂಪೆನಿಗಳಿಗೆ ಅಪಾರ ಪ್ರಮಾಣದ ಲಾಭ ಮಾಡಿಕೊಳ್ಳಲು ಅವಕಾಶ ಕಲ್ಪಿಸಿತ್ತು. ಈಗಲೂ ಸಹ ಅನಿಲ ಬೆಲೆಯನ್ನು ಕೇವಲ ರೂ. 200 ಮಾತ್ರವೇ ಇಳಿಕೆ ಮಾಡಿ ತೈಲೋತ್ಪನ್ನ ಕಂಪೆನಿಗಳಿಗೆ ಲಾಭ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದರಲ್ಲಿ, ಜನರ ಹಿತಾಸಕ್ತಿ ಎಲ್ಲಿ ಅಡಗಿದೆ ಪ್ರಧಾನಿ ನರೇಂದ್ರ ಮೋದಿ
ಅವರೇ ಎಂದು ಪ್ರಶ್ನಿಸಿದ್ದಾರೆ.
ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ
ನರೇಂದ್ರ ಮೋದಿ
ಅವರು ಮತ್ತು ಅವರ ಪಕ್ಷ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು.
ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ.
ಅಡುಗೆ ಅನಿಲ ದರ ನಿಗದಿಗೆ ಆಧಾರವಾದ ನನ್ನ ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ ಮೋದಿಜೀ
ಅವರೇ? ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.
CM Siddaramaiah ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ
ಮೋದಿ
ಅವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ ಜನಪರವಾದ ಯೋಜನೆಗಳಿಂದ ಪ್ರೇರಿತರಾಗಿ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.
ಚುನಾವಣಾ ಪೂರ್ವದಲ್ಲಿ ನಾವು ಪ್ರಣಾಳಿಕೆ ಮೂಲಕ ನೀಡಿದ ಭರವಸೆಗಳಲ್ಲಿ ಪ್ರಮುಖವಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ಧತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.