Shivamogga District Child Protection Officer ಭದ್ರಾವತಿ ನಗರ ವ್ಯಾಪ್ತಿಯ ಹೊಸ ಸೇತುವೆ ಪಕ್ಕದ ಪೊದೆಯಲ್ಲಿ ಸುಮಾರು 5 ರಿಂದ 6 ತಿಂಗಳ ಸೀಳುತುಟಿ ಹೊಂದಿರುವ ಹೆಣ್ಣು ಮಗು ಪತ್ತೆಯಾಗಿದ್ದು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ.
Shivamogga District Child Protection Officer ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಟಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ, ದೂ.ಸಂ: 08182-295511 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.