Monday, May 4, 2026
Monday, May 4, 2026

Karnataka Achievement Award ಉದ್ಯಮಿ ನಂಜುಂಡಶೆಟ್ಟಿ ಅವರಿಗೆ “ಕರ್ನಾಟಕ ಸಾಧಕ ಪ್ರಶಸ್ತಿ”

Date:

Karnataka Achievement Award ಹೆಸರಾಂತ ಉದ್ಯಮಿ, ಶಿವಮೊಗ್ಗದ ಎಸ್‌ಜಿಕೆ ಇಂಡಸ್ಟ್ರೀಸ್ ನಿರ್ದೇಶಕ ಬಿ.ಸಿ. ನಂಜುಂಡ ಶೆಟ್ಟಿ ಅವರಿಗೆ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ “ಕರ್ನಾಟಕ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ ಶಿವಮೊಗ್ಗ ನಗರದ ಕೈಗಾರಿಕೋದ್ಯಮಿ, ದಾನಿ, ಸಮಾಜ ಸೇವಕ ನಂಜುಂಡ ಶೆಟ್ಟಿ ಅವರಿಗೆ ವಿಶೇಷ ಗೌರವ ನೀಡಿ ಅಭಿನಂದಿಸಲಾಯಿತು.

ಉದ್ಯಮಿ ಬಿ.ಸಿ.ನಂಜುಂಡಶೆಟ್ಟಿ ಅವರು 50 ವರ್ಷದ ಕೈಗಾರಿಕಾ ಕ್ಷೇತ್ರದ ಕಾರ್ಯ, 500 ಕೋಟಿ ರೂ.ಗೂ ಹೆಚ್ಚಿನ ವಹಿವಾಟು, 4000 ಕ್ಕೂ ಹೆಚ್ಚು ಕಾರ್ಮಿಕರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ, ವಿಶ್ವದಲ್ಲಿ ಒಟ್ಟು ಮಾರುಕಟ್ಟೆಯ ಶೇ. 25 ಉತ್ತಮ ದರ್ಜೆಯ ವಾಲ್ಸೆಟ್ ತಯಾರಿ ಮತ್ತು ರಫ್ತು, ಕಾರ್ಖಾನೆಗಳಲ್ಲಿ ನೂತನ ತಾಂತ್ರಿಕ ಅಳವಡಿಕೆ ಸೇರಿದಂತೆ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ.

ಕೈಗಾರಿಕಾ ಕ್ಷೇತ್ರದಲ್ಲಿ ಐದು ದಶಕಗಳ ಸಾಧನೆ ಮತ್ತು ಸಮುದಾಯ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿರುವ ಉದ್ಯಮಿ ಬಿ.ಸಿ.ನಂಜುಂಡಶೆಟ್ಟಿ ಅವರ ಸೇವೆ ಗಮನಿಸಿ ಜೀವಮಾನದ ಸಾಧನೆಯಾಗಿ “ಕರ್ನಾಟಕ ಸಾಧಕ ಪ್ರಶಸ್ತಿ” ಅನ್ನು ರಾಯಚೂರಿನಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

Karnataka Achievement Award ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಶ್ರೀಮತಿ ಮನೋಹರ, ಉದ್ಯಮಿ ಕಿರಣ್, ಎಂ.ರಾಜು, ಪ್ರದೀಪ್ ಎಲಿ, ರಮೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಜಿ.ವಿ.ಕಿರಣ್‌ಕುಮಾರ್ ಸೇರಿದಂತೆ ಶಿವಮೊಗ್ಗದ ಕೈಗಾರಿಕಾ ಉದ್ಯಮಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...