Saturday, December 6, 2025
Saturday, December 6, 2025

Rotary Shimoga East ಕ್ರೀಡೆ ಜೀವನದಲ್ಲಿಏಕಾಗ್ರತೆ & ಲವಲವಿಕೆ ತುಂಬುತ್ತದೆ- ಸುಮತಿ ಕುಮಾರಸ್ವಾಮಿ

Date:

Rotary Shimoga East ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಸಹಯೋಗದಲ್ಲಿ ಹೊಳಲೂರು ವಲಯ ಮಟ್ಟದ 14 ವರ್ಷದೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಏಕಾಗ್ರತೆ ಶಕ್ತಿ ಹೆಚ್ಚುವ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ನಿಕಟಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಅವರು ಹೇಳಿದರು.

ಕ್ರೀಡಾಕೂಟಗಳು ಯಶಸ್ವಿಯಾಗಲು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರ ಮುಖ್ಯ. ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಯಶಸ್ವಿಯಾಗಲು ನಿರಂತರ ಅಭ್ಯಾಸ ಮಾಡಬೇಕು. ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.

ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮಾಂತರ ಪ್ರದೇಶದಲ್ಲಿಯೂ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಸಂಕಲ್ಪವನ್ನು ವಿದ್ಯಾರ್ಥಿಗಳು ಕೈಗೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧಿಸಲು ನಿರಂತರ ಅಭ್ಯಾಸ ಹಾಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯ ಎಂದು ಹೇಳಿದರು.

Rotary Shimoga East ಇದೇ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಹಾಸ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್‌ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...