Minister Krishna Bhairegowda ಮಳೆ ಕೊರತೆ ಮತ್ತು ಬಿತ್ತನೆ ಪ್ರಮಾಣ ಕುಂಠಿತವಾಗಿರುವುದನ್ನು ಆಧರಿಸಿ 113 ತಾರೀಕುಗಳಲ್ಲಿ ಜಂಟಿ ಸಮೀಕ್ಷೆ ನಡೆಸಲಾಗಿತ್ತು. ಈ ಪೈಕಿ 62 ತಾಲೂಕುಗಳು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಬರವನ್ನು ಎದುರಿಸುತ್ತಿವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ಬರ ಕುರಿತಂತೆ ನಡೆದ ಸಂಪುಟ ಉಪಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು. 51 ತಾಲೂಕುಗಳಲ್ಲದೆ ಇನ್ನೂ 83 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೇಂದ್ರದ ಮಾನದಂಡಗಳು ಕಠಿಣವಾಗಿರುವುದರಿಂದ ಜನರ ನಿರೀಕ್ಷೆಗೆ ತಕ್ಕಂತೆ ಬರ ಘೋಷಣೆ ಮಾಡಲು ಸಾಧ್ಯವಾಗಲ್ಲ. ಈ ಕಾರಣಕ್ಕಾಗಿ ಮಾನದಂಡ ಬದಲಿಸುವಂತೆ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕಾದರೆ ಶೇ. 60ರಷ್ಟು ಮಳೆ ಕೊರತೆ ಇರಬೇಕು. ಹಾಗೂ ಮೂರು ವಾರ ಶುಷ್ಕ ವಾತಾವರಣವಿರಬೇಕು. ಆದರೆ 51ಕ್ಕೂ ಅಧಿಕ ತಾಲೂಕುಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.
Minister Krishna Bhairegowda ಮೊದಲ ಜಂಟಿ ಸಮೀಕ್ಷೆ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿತಿದೆ ಎಂದು ಅಧಿಕಾರಿಗಳು, ರೈತರು ದೂರಿದ್ದಾರೆ.
ಆದ್ದರಿಂದ ಮತ್ತೊಮ್ಮೆ ಬೆಳೆ ಸಮೀಕ್ಷೆ ನಡೆಸಲು ಅವರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.