Ksheera Bhagya ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ.
ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ.
ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ 2013ರಲ್ಲಿ ನಮ್ಮ ಸರ್ಕಾರವು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿತ್ತು.
Ksheera Bhagya ಕ್ಷೀರಭಾಗ್ಯ ಜಾರಿಗೊಂಡ ನಂತರದಿಂದ ಶಾಲಾ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಯಾಗಿದೆ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ ಮತ್ತು ರಾಜ್ಯದ ಹಾಲು ಉತ್ಪಾದಕ ಒಕ್ಕೂಟಗಳಿಗೂ ಬಲ ಬಂದಿದೆ ಎನ್ನುವುದನ್ನು ತಿಳಿಸಲು ಹೆಮ್ಮೆಯಾಗುತ್ತದೆ ಎಂದು ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.