Backward Classes Welfare Department 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಸೆ. 25 ಕಡೆಯ ದಿನವಾಗಿದ್ದು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಸವಚೇತನ ಬಿಲ್ಡಿಂಗ್, 100 ಅಡಿ ರಸ್ತೆ, ರವೀಂದ್ರನಗರ, ಶಿವಮೊಗ್ಗ ಜಿಲ್ಲೆ, ದೂ.ಸಂ:08182-222129.
ತರಬೇತಿ ಅವಧಿಯು 4 ವರ್ಷಗಳದ್ದಾಗಿದ್ದು, ಮಾಹೆಯಾನ ರೂ.4000 ಗಳ ತರಬೇತಿ ಭತ್ಯೆ ನೀಡಲಾಗುವುದು. ಪ್ರವರ್ಗ 2ಎ, 3ಎ ಮತ್ತು 3ಬಿ ಗಳಿಗೆ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಹಾಗೂ ಅಭ್ಯರ್ಥಿಯ ಗರಿಷ್ಟ ವಯೋಮಿತಿಯು ಪ್ರಕಟಣೆ ದಿನಾಂಕಕ್ಕೆ 30 ವರ್ಷಗಳನ್ನು ಮೀರಬಾರದು. ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ.
Backward Classes Welfare Department ಅಭ್ಯರ್ಥಿಯ ಗರಿಷ್ಟ ವಯೋಮಿತಿಯು 31 ವರ್ಷಗಳು ಮೀರಿರಬಾರದು. ತರಬೇತಿಗೆ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷ ಅವಧಿಯ ಒಳಗಿರುವವರು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಸಿರಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.