Job fair in Shivamogga ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ.15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೋಮಾ, ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
Job fair in Shivamogga ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425೯ಗಳನ್ನು ಸಂಪರ್ಕಿಸುವ0ತೆ ತೀರ್ಥಹಳ್ಳಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.