Friday, April 18, 2025
Friday, April 18, 2025

JCI Shivamogga ಪ್ಲಾಸ್ಟಿಕ್ ಬದಲಿಗೆ ಕಾಗದದ ಚೀಲ ಬಳಸಿ-ಪೂರ್ಣಿಮಾ ಸುನೀಲ್

Date:

JCI Shivamogga ಪ್ಲಾಸ್ಟಿಕ್ ಅತಿಯಾಗಿ ಬಳಸುವುದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಸದೇ ಇರುವ ಸಂಕಲ್ಪ ಮಾಡಬೇಕು. ಪ್ಲಾಸ್ಟಿಕ್ ಬದಲಾಗಿ ಪೇಪರ್ ಅಥವಾ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಬಸವೇಶ್ವರ ದೇವಸ್ಥಾನದ ಹತ್ತಿರ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಟ್ರಾಫಿಕ್ ಫಲಕ ಅನಾವರಣ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜನಿಕರು ಮಾರುಕಟ್ಟೆ ಅಥವಾ ಯಾವುದೇ ವಸ್ತುಗಳನ್ನು ಖರೀದಿಸಲು ಬರುವಾಗ ಬಟ್ಟೆ ಬ್ಯಾಗ್‌ಗಳನ್ನು ತರಬೇಕು. ಇದರಿಂದ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗುತ್ತದೆ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯ ಎಂದು ತಿಳಿಸಿದರು.

ಸುರಕ್ಷತೆ ದೃಷ್ಠಿಯಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಮಕ್ಕಳಿಗೆ ವಾಹನ ಚಲಾಯಿಸಲು ಕೊಡಬಾರದು. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸದೇ ಸಂಚಾರ ನಿಯಮ ಫಲಕ ಇರುವ ಅನುಸಾರ ನಿಲ್ಲಿಸಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಪಘಾತ ಪ್ರಮಾಣ ಕಡಿಮೆ ಆಗುತ್ತದೆ ಎಂದರು.

ಪಾಲಿಕೆ ಮಾಜಿ ಸದಸ್ಯ ರಾಮು ಮಾತನಾಡಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಎಲ್ಲರೂ ನಿಲ್ಲಿಸಬೇಕು. ಪರಿಸರ ಸಂರಕ್ಷಣೆಗೆ ಪೂರಕವಾದ ಚಟುವಟಿಕೆಗಳನ್ನು ಎಲ್ಲರೂ ಮಾಡಬೇಕು. ಸಂಘ ಸಂಸ್ಥೆಗಳ ಸಹಕಾರವು ಮುಖ್ಯ ಎಂದು ತಿಳಿಸಿದರು.

JCI Shivamogga ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಬೀದಿ ಬದಿಯ ವ್ಯಾಪಾರಿಗಳಿಗೆ ಪೇಪರ್ ಬ್ಯಾಗ್ ಹಾಗೂ ಬಟ್ಟೆ ಬ್ಯಾಗ್ ಹಂಚುವ ಮೂಲಕ ಗ್ರಾಹಕರು, ವ್ಯಾಪಾರಿಗಳಿಗೆ ಬಟ್ಟೆ ಹಾಗೂ ಪೇಪರ್ ಬ್ಯಾಗ್ ಉಪಯೋಗಿಸುವಂತೆ ಅರಿವು ಮೂಡಿಸಲಾಯಿತು.

ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಜೆಸಿಐ ವಲಯ ಅಧ್ಯಕ್ಷ ಅನುಷ್‌ಗೌಡ, ಜೆಸಿಐ ಸಪ್ತಾಹ ಸಂಚಾಲಕ ಪ್ರದೀಪ್, ಪಾಲಿಕೆ ಸದಸ್ಯೆ ಭಾನುಮತಿ ವಿನೋದ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಪೊಲೀಸ್ ಸಿಬ್ಬಂದಿ, ಜೆಸಿಐ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...