Sunday, November 29, 2026
Sunday, November 29, 2026

Lions Club Shirakoppa ಶಿರಾಳಕೊಪ್ಪ ಲಯನ್ಸ್ & ಲಿಯೋ ಕ್ಲಬ್ ವತಿಯಿಂದ ವಿದ್ಯಾಮಿತ್ರ ಕಾರ್ಯಕ್ರಮ

Date:

Lions Club Shirakoppa ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಶಿರಾಳಕೊಪ್ಪ ವತಿಯಿಂದ ದೇವಿಕೊಪ್ಪ ಮತ್ತು ಇಡುಕಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಲಯನ್ಸ್ ವಿದ್ಯಾ ಮಿತ್ರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ವೆಟರ್ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಲಯನ್ ಅಧ್ಯಕ್ಷ ಶಿವಯೋಗಿ ಗೌಡ ಮಾತನಾಡುತ್ತಾ ಇಂದು ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿಯಲ್ಲಿದ್ದು, ಆ ಶಾಲೆಗಳಿಗೆ ಅವಶ್ಯಕತೆ ಇರುವ ಸಂಪನ್ಮೂಲಗಳನ್ನು ಕೊಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡಿ ಉಳಿವಿಗಾಗಿ ನಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಅಭಿಪ್ರಾಯ ಪಟ್ಟರು.

ಖಾಸಗಿ ಶಾಲೆಯ ವಿದ್ಯಾರ್ಥಿಗಳಂತೆ ಸರ್ಕಾರಿ ಶಾಲೆಯ ಮಕ್ಕಳು ಸಮವಸ್ತ್ರ ಸ್ವೆಟರ್ ಗಳು , ಓದುಬರಹ ಕಲಿಯಲು ಕುರ್ಚಿ ಟೇಬಲ್ ಗಳನ್ನು ಗ್ರಾಮಸ್ಥರ ಸಹಕಾರದೊಂದಿಗೆ ನಮ್ಮ ಕ್ಲಬ್ ನೀಡಿದೆ. ಅವಶ್ಯಕತೆ ಇರುವವರ ಮುಖದಲ್ಲಿ ಮಂದಹಾಸ ಮೂಡಿಸುವುದು ಒಂದು ಸೇವೆ. ಚಿಕ್ಕ ಚಿಕ್ಕ ಸೇವೆಗಳಾದರೂ ನಿರಂತರ ಸೇವೆಗಳಿಂದ ಸಮಾಜದ ಉನ್ನತಿ ಸಾಧ್ಯ ಎಂಬುದು ನಮ್ಮ ಸಂಸ್ಥೆಯ ಅಭಿಪ್ರಾಯ ಎಂದರು.

ಎಲ್ಲಿ ಸಂಪನ್ಮೂಲಗಳ ಕೊರತೆ ಇದೆಯೋ, ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಲಯನ್ಸ್ ಇದೆ ಎಂದರು.

ದೇವಿ ಕೊಪ್ಪ ಮತ್ತು ಇಡುಕ್ಕಿನ ಹೊಸಕೊಪ್ಪ ಗ್ರಾಮದ ಶಾಲೆಗಳಿಗೆ ನಲಿ-ಕಲಿ ಟೇಬಲ್ ಮತ್ತು ಕುರ್ಚಿಗಳು ಹಾಗೂ ಶಾಲೆಯಲ್ಲಿ ಓದುತ್ತಿರುವ ಸುಮಾರು 50 ಮಕ್ಕಳಿಗೆ ಸ್ವೆಟರ್ ವಿತರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Lions Club Shirakoppa ಲಯನ್ಸ್ ಕ್ಲಬ್ ಶಿರಾಳಕೊಪ್ಪ ಈ ವರ್ಷ 300 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ವೆಟರ್ ಗಳನ್ನು ನೀಡುವ ಅತ್ಯುತ್ತಮ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಇಂದು ಎರಡು ಶಾಲೆಗಳಲ್ಲಿ ವಿತರಣೆ ಮಾಡಿರುತ್ತೇವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರುಗಳು ಗ್ರಾಮಸ್ಥರು ಲಯನ್ಸ್ ನ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...