Thursday, March 19, 2026
Thursday, March 19, 2026

Rural Sports Event ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು:ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು

Date:

Rural Sports Event ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಸರ್ಕಾರ ಅವುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕೂಟ ಆಯೋಜಿಸಿ ಪುನಶ್ಚೇತನಗೊಳಿಸುತ್ತಿದೆ ಎಂದು ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್ ಹೇಳಿದರು.

ಚಿಕ್ಕಮಗಳೂರು, ತಾಲ್ಲೂಕಿನ ಬೆಟ್ಟದಮಳಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವತಿಯಿಂದ ದೇವದಾನದ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ಕೊಡುವ ಸಲುವಾಗಿ ಖೋಖೋ, ಕಬ್ಬಡ್ಡಿ ಸ್ಪರ್ಧೆಗಳನ್ನೊಳಗೊಂಡ ಕ್ರೀಡಾಕೂಟವನ್ನು ಆಯೋಜಿಸಲು ಮುಂದಾಗುತ್ತಿದೆ. ಇದರ ಸದುಪಯೋಗವನ್ನು ಗ್ರಾಮೀಣ ವಿದ್ಯಾರ್ಥಿಗಳು ಪಡೆದುಕೊಳ್ಳುವ ಮೂಲಕ ಕ್ರೀಡಾಸಕ್ತಿ ಬೆಳೆಸಿಕೊಂಡು ರಾಜ್ಯಮಟ್ಟದಲ್ಲಿ ಹೆಸರು ಗಳಿಸಬೇಕು ಎಂದರು.

ತಾಲ್ಲೂಕು ದೈಹಿಕ ಶಿಕ್ಷಕ ಪರಮೇಶ್ವರ್ ಪ್ರಾಸ್ತಾವಿಕ ಮಾತನಾಡಿ ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ ವಾದ ಸಂಗತಿ. ಗೆಲುವು ಕಂಡವರು ಮುಂದಿನ ಹೆಜ್ಜೆಯತ್ತ ದಾಪುಗಾಲು ಇರಿಸಿದರೆ. ಸೋಲುಂಡವರು ಮರಳಿ ಪ್ರಯತ್ನದ ಕಡೆ ಹೆಚ್ಚು ಗಮನಹರಿಸಿದರೆ ಯಶಸ್ಸು ಲಭಿಸಲಿದೆ ಎಂದರು.

Rural Sports Event ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ನಾಗೇಶ್, ಎಸ್‌ಡಿಎಂಸಿ ಅಧ್ಯಕ್ಷ ಸಂಪತ್, ವಿಪತ್ತು ನಿರ್ವಹಣಾ ಘಟಕದ ಚಂದ್ರ ಶೇಖರ್, ಫ್ಲೌಡ್ ಫ್ಯಾಕ್ಟರಿ ಮಾಲೀಕರಾದ ಚಂದಿಲ್ ಕುಮಾರ್, ವೈಶ್ಯ ಹಾಸ್ಟೆಲ್ ಮಾಲೀಕ ರಮೇಶ್, ಕಾಫಿ ಬೆಳೆಗಾರ ನಾಗೇಶ್‌ಗೌಡ, ದೇವದಾನ ಪಿಡಿಓ ದೇವರಾಜ್, ಕೃಷ್ಣಚಾರ್ಯ, ಸಿ.ಆರ್.ಪಿ ಮಹೇಶ್, ಮಾನ್ವಿತಾ, ಪ್ರಕಾಶ್ ಹಾಗೂ ಮತ್ತಿತರರು ಇದ್ದರು.
ಶಾಲೆಯ ಶಿಕ್ಷಕರಾದ ಮಂಜುಳದೇವಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀಮತಿ ಅನುಸೂಯ ಸ್ವಾಗತಿಸಿದರು. ಪುಷ್ಪವತಿ ನಿರೂಪಿಸಿದರು. ವನಜಾಕ್ಷಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...