Friday, March 20, 2026
Friday, March 20, 2026

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ಶಾಲೆಗೆ ಶುದ್ಧನೀರಿನ ಘಟಕ ಕೊಡುಗೆ

Date:

JCI Shivamogga ಶಿವಮೊಗ್ಗ ತಾಲ್ಲೂಕಿನ ಬಿರನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಜೆ ಸಿ ಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಸಲಾಗಿದೆ.

ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು. ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆ ಇರುವ ಮಾಹಿತಿಯನ್ನು ಪಡೆದು ಜೆಸಿಐ ಸಂಸ್ಥೆ ಶುದ್ದ ಕುಡಿಯುವ ನೀರಿನ ಘಟಕವನ್ನು ವಿದ್ಯಾರ್ಥಿಗಳಿಗಾಗಿ ಶಿಕ್ಷಕರಿಗಾಗಿ ಅಳವಡಿಸಿದೆ.

ಜೆ ಸಿ ಐ ಭಾರತದಲ್ಲಿ ಜೆ ಸಿ ಐ ವಿಲ್ ವೀಕ್ ಕಾರ್ಯಕ್ರಮ ನಡೆಯುತ್ತಿದ್ದು ಪ್ರತಿದಿನ ವಿಶೇಷ ಕಾರ್ಯಕ್ರಮ ವಿಶೇಷ ಸ್ಥಳಗಳಲ್ಲಿ ನಡೆಯುತ್ತಿದೆ. ಸಾವಿರಾರು ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ಕಾರ್ಯಕ್ರಮದ ಉಪಯೋಗವಾಗುತ್ತಿದೆ. ಮೆಡಿಕಲ್ ಕ್ಯಾಂಪ್, ಬ್ಲಡ್ ಡೊನೇಷನ್, ಆಹಾರ ವಿತರಣೆ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವುದು, ಗಿಡ ನೆಡುವುದು, ಹೀಗೆ ಹತ್ತು ಹಲವು ಕಾರ್ಯಕ್ರಮಗಳು ನಿರಂತರವಾಗಿ ಜೆ ಸಿ ಐ ಸಪ್ತಾಹದಲ್ಲಿ ನಡೆಯುತ್ತಿದೆ ಎಂದು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಮಾತನಾಡಿದರು.

ಆರಾಧನಾ ಆರ್ಥೋಪೆಡಿಕ್ ಹಾಸ್ಪಿಟಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಜೆಸಿಎ ಸಂಸ್ಥೆಯ ಮೂಲಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಳವಡಿಸಲಾಯಿತು.

JCI Shivamogga ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜೆ ಸಿ ಡಾ. ಶೋಭಾ, ಜೆ ಸಿ ವಿಜಯಲಕ್ಷ್ಮಿ, ಜೆ ಸಿ ಪ್ರಿಯಾಂಕ ಗೌಡ, ಜೆಸಿ ಸಂತೋಷ, ಜೆಸಿ ನವೀನ್ ತಲಾರಿ, ಶಾಳೆಯ ಮುಖ್ಯ ಶಿಕ್ಷಕರಾದ ಹಿರೇಮಠ್ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಎಸ್ ಟಿ ಎಂ ಸಿ ಕಮಿಟಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...