Central Army Council ಕೇಂದ್ರೀಯ ಸೈನಿಕ ಮಂಡಳಿಯಿಂದ “ಆರ್ಥಿಕ ನೆರವು” ಮತ್ತು “ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಯಡಿಯಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ವ್ಯಾಸಂಗ ಮಾಡುತ್ತಿರುವವರು ಅ.30 ರವರೆಗೆ ಹಾಗೂ ವೃತ್ತಿಪರ ಶಿಕ್ಷಣವಲ್ಲದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ನ.30 ರವರೆಗೆ ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರು ಮಕ್ಕಳು ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ ಪ್ರವೇಶಾತಿ ಪಡೆದ ಮೊದಲನೇ ವರ್ಷದಲ್ಲಿಯೇ ನ.30 ರೊಳಗಾಗಿ ಜೆ.ಸಿ.ಓ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ನಲ್ಲಿ ಅರ್ಜಿ ಸಲ್ಲಿಸಹುದಾಗಿರುತ್ತದೆ.
Central Army Council ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂರವಾಣಿ ಸಂಖ್ಯೆ : 08182-220925 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಎ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.