Thursday, November 21, 2024
Thursday, November 21, 2024

Shivamogga Udyog Mela ಸೆ,15 ಉದ್ಯೋಗ ಮೇಳದಲ್ಲಿ 50 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ- ಡಾ.ಸೆಲ್ವಮಣಿ

Date:

Shivamogga Udyog Mela ಸೆಪ್ಟಂಬರ್ 15 ರಂದು ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ಸುಮಾರು 50ಕ್ಕೂ ಹೆಚ್ಚಿನ ಬೃಹತ್ ಕಂಪನಿಗಳ ಉದ್ಯೋಗದಾತರು ಆಗಮಿಸಿ, 5000ಕ್ಕೂ ಹೆಚ್ಚಿನ ವಿದ್ಯಾವಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು.

ಅವರು, ಜಿಲ್ಲಾ  ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃಧ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಶಿವಮೊಗ್ಗ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ, ಬೃಹತ್ ಉದ್ಯೋಗ ಮೇಳದ ಪೂರ್ವಸಿದ್ಧತಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರು, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲಾ ರೀತಿಯ ಉನ್ನತ ಶಿಕ್ಷಣ, ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊoಡು ಭಾಗವಹಿಸಲು ಅವಕಾಶ ಒದಗಿಸಲಾಗಿದೆ ಎಂದರು.

ಸಾಫ್ಟ್ವೇರ್, ಆಟೋಮೊಬೈಲ್, ಫೌಂಡ್ರಿ, ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸೇರಿದಂತೆ 50ಕ್ಕೂ ಹೆಚ್ಚಿನ ಸ್ಥಳೀಯ ಮತ್ತು ರಾಜ್ಯ ಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ. ಈ ಮೇಳದಲ್ಲಿ ಅಪ್ರೆಂಟಿಸ್‌ಶಿಫ್ ತರಬೇತಿ ಪಡೆಯಲಿಚ್ಚಿಸುವವರು, ಕೌಶಲ್ಯ ತರಬೇತಿ ಪಡೆಯುವವರು, ಆಯ್ಕೆಗೊಂಡ ನಂತರ ನಿಗಧಿಪಡಿಸಿದ ವಿಷಯದಲ್ಲಿ ತರಬೇತಿ ಪಡೆಯಲಿಚ್ಚಿಸುವವರು, ಸ್ವಯಂ ಉದ್ಯೋಗ ಆರಂಭಿಸಲಿಚ್ಚಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದ ಅವರು, ಇದೇ ಸಂದರ್ಭದಲ್ಲಿ ಆಸಕ್ತರಿಗಾಗಿ ಬ್ಯಾಂಕುಗಳ ಸಾಲಸೌಲಭ್ಯ ಮುಂತಾದ ಮಾಹಿತಿಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದ ಅವರು, ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು, ಕೈಗಾರಿಕೋದ್ಯಮಿಗಳು ಮುಂಚಿತವಾಗಿ ನೋಂದಾಯಿಸಿಕೊಳ್ಳುವoತೆ ಸೂಚಿಸಲಾಗಿದೆ ಎಂದರು.

Shivamogga Udyog Mela ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕೌಶಲ್ಯಾಭಿವೃದ್ಧಿ ಇಲಾಖೆಯ ನಿರ್ದೇಶಕ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರು ಮಾತನಾಡಿ, ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯಾಧುನಿಕ ರೀತಿಯ ಎಲೆಕ್ಟಿçಕ್ ವೆಹಿಕಲ್ ಮತ್ತು ರೋಬೋಟಿಕ್ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 70,000ಮಕ್ಕಳು ಐಟಿಐ ಮತ್ತು ಡಿಪ್ಲೋಮಾ ತರಬೇತಿಗೆ ದಾಖಲಾಗಿದ್ದಾರೆ. ತರಬೇತಿ ಪಡೆದ ವಿದ್ಯಾರ್ಥಿಗಳು ಪಡೆದುಕೊಳ್ಳುವ ಪ್ರಮಾಣ ಪತ್ರಕ್ಕೆ ದೇಶ-ವಿದೇಶಗಳಲ್ಲಿ ಮಾನ್ಯತೆ ದೊರೆಯಲಿದೆ ಎಂದರು.

ಆಸಕ್ತ ಯುವಕರು ತಮ್ಮ ಹೆಸರನ್ನು skillconnect.kaushalkar.com/Candidatereg ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ, ಹಾಗೂ ಯಾವುದೇ ಸರ್ಕಾರಿ ಐಟಿಐ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ ಮೊ.ನಂ. 8457825088, 9880005425 ನ್ನು ಸಂಪರ್ಕಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು, ಜಿಲ್ಲಾ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅಧಿಕಾರಿ ಖಲಂದರ್‌ಖಾನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...