Monday, February 2, 2026
Monday, February 2, 2026

M. B. Patil ಹರಿಪ್ರಸಾದ್ ಹೇಳಿಕೆ: ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ- ಸಚಿವ ಎಂ.ಬಿ.ಪಾಟೀಲ್

Date:

M. B. Patil ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ
ನಡೆಸಿರುವ ಬಿ ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ, ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು.

ಇತ್ತೀಚೆಗೆ ಅವರನ್ನು ಸಿಡಬ್ಲ್ಯುಸಿಗೆ ಕೂಡ ಸೇರಿಸಿಕೊಳ್ಳಲಾಗಿದೆ. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ’ ಎಂದರು.

ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.

ಯಾರು ಎಷ್ಟೇ ದೊಡ್ಡವರಿರಬಹುದು.‌ ಆದರೆ ಎಲ್ಲರಿಗೂ ಒಂದು ಮಿತಿ ಕೂಡ ಇರುತ್ತದೆ. ಯಾರೂ ಲಕ್ಷ್ಮಣರೇಖೆಯನ್ನು ದಾಟಲು ಹೋಗಬಾರದು. ಯಾರೋ ಸಣ್ಣ ವ್ಯಕ್ತಿಯೊಬ್ಬರು ಏನು ಮಾತನಾಡಿದರೂ ನಡೆಯುತ್ತದೆ. ಆದರೆ ಹರಿಪ್ರಸಾದ್ ಥರದವರು ಮಾತನಾಡಿದರೆ ಅದು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

M. B. Patil ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ. ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...