Wednesday, April 29, 2026
Wednesday, April 29, 2026

Vehicle Parking ಶಿವಮೊಗ್ಗ ಜಯನಗರ ಮುಖ್ಯರಸ್ತೆಯಲ್ಲಿ ವಾಹನ ಪಾರ್ಕಿಂಗ್ ಜಿಲ್ಲಾಧಿಕಾರಿ ಆದೇಶ

Date:

Vehicle Parking ಶಿವಮೊಗ್ಗ ನಗರದ ಶಿವಮೂರ್ತಿ ಸರ್ಕಲ್ ಬಳಿ ಮೆಟ್ರೋ ಆಸ್ಪತ್ರೆ ಇದ್ದು ವಾಹನ ದಟ್ಟಣೆ ಹೆಚ್ಚಾಗಿ ಶಿವಮೂರ್ತಿ ಸರ್ಕಲ್‍ನಿಂದ ಹಾದು ಹೋಗುವ ಜಯನಗರ ಮುಖ್ಯ ರಸ್ತೆಯಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುತ್ತಾರೆ ಅಲ್ಲದೇ ರಸ್ತೆಯಲ್ಲಿ ಸರ್ವೋದಯ ಶಾಲೆ ಇದೆ. ವಿದ್ಯಾರ್ಥಿಗಳ ಓಡಾಟ ಸಹ ಹೆಚ್ಚಾಗಿರುತ್ತದೆ ಮತ್ತು ನೆಹರೂ ಸ್ಟೇಡಿಯಂಗೆ ಹೋಗುವ ದ್ವಾರವೂ ಸಹ ಇರುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ರಸ್ತೆಯಲ್ಲಿನ ವಾಹನ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಜಯನಗರ ಮುಖ್ಯ ರಸ್ತೆಯಲ್ಲಿ ಶಿವಮೂರ್ತಿ ಸರ್ಕಲ್‍ನಿಂದ ಡಿ.ಸಿ.ಕಾಂಪೌಂಡ್‍ವರೆಗೆ ಸುಗಮ ಸಂಚಾರ ದೃಷ್ಠಿಯಿಂದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ.

ವಾಹನಗಳ ನಿಲುಗಡೆ ನಿಷೇಧಿತ ಸ್ಥಳ : ಜಯನಗರ ಮುಖ್ಯ ರಸ್ತೆಯಲ್ಲಿ ಶಿವಮೂರ್ತಿ ಸರ್ಕಲ್‍ನಿಂದ ಡಿ.ಸಿ. ಕಾಂಪೌಂಡ್‍ವರೆಗೆ ಎಡಭಾಗ ಹಾಗೂ ಜಯನಗರ ಮುಖ್ಯರಸ್ತೆಯಲ್ಲಿ ಶಿವಮೂರ್ತಿ ಸರ್ಕಲ್‍ನಿಂದ ಜಯನಗರ 1ನೇ ಕ್ರಾಸ್ ಬಲಭಾಗ ಎಲ್ಲಾ ವಾಹನಗಳ ನಿಲುಗಡೆ ನಿಷೇದಿಸಲಾಗಿದೆ.

Vehicle Parking ವಾಹನಗಳ ನಿಲುಗಡೆ ಸ್ಥಳ (ಪಾರ್ಕಿಂಗ್): ಜಯನಗರ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯದಿಂದ ಡಿ.ಸಿ. ಕಾಂಪೌಂಡ್‍ವರೆಗೆ ಬಲಭಾಗ ವಾಹನಗಳ ನಿಲುಗಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...