Friday, April 25, 2025
Friday, April 25, 2025

Rotary Club Shimoga ಶಿಕ್ಷಕರ ಉತ್ತಮ ಕೆಲಸದಿಂದ ಸದೃಢ ಸಮಾಜ ನಿರ್ಮಾಣ-ಸಿ.ರಾಜು

Date:

Rotary Club Shimoga ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ಮುನ್ನಡೆಯುವಂತೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ಮಾರ್ಗದರ್ಶನ ನೀಡುವವರು ಶಿಕ್ಷಕರು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಸಿ.ರಾಜು ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನದ ನೆರವಿನಿಂದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡುವಲ್ಲಿ ಶಿಕ್ಷಕರು, ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಉತ್ತಮ ಕೆಲಸದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಶಿಕ್ಷಕರ ದಿನಾಚರಣೆಯ ವಿಶೇಷ ಗೌರವ ಸಲ್ಲಿಸುವ ಆಶಯದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಕ್ರಮಗಳನ್ನು ರೋಟರಿ ಸಂಸ್ಥೆ ನಡೆಸುತ್ತಿದೆ ಎಂದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ರಶ್ಮಿ ಹಾಗೂ ಮಂಜುಳಾ ರಾಜು ಉಪನ್ಯಾಸಕರಿಗೆ ವಿಶೇಷ ಆಟಗಳನ್ನು ಅಡಿಸಿದರು.

ಉಪನ್ಯಾಸಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷ ಆಗಿತ್ತು. ಮಹಿಳಾ ಶಿಕ್ಷಕರು ಸಹದ್ಯೋಗಿ ಮಿತ್ರರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದರು.

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಶಿಕ್ಷಕರಿಗೆ ಕಿರುಕಾಣಿಕೆ ನೀಡಲಾಯಿತು. ಪ್ರಾಚಾರ್ಯ ಬಸವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಮಂಜುಳಾ ರಾಜು, ಮನೋಹರ್, ರಶ್ಮಿ ಸೇರಿದಂತೆ ಪದಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...