Saturday, December 6, 2025
Saturday, December 6, 2025

Madhu Bangarappa ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳ ಆರಂಭಕ್ಕೆ ಪ್ರಸ್ತಾವನೆ-ಮಧು ಬಂಗಾರಪ್ಪ

Date:

Madhu Bangarappa ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 500-600 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಶಿಕ್ಷಕರ ಸಂಘ ಹಾಗೂ ಸೊರಬದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ರಾಜ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅಂತೆಯೇ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರoತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.

ಈ ಶಾಲೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸಕ್ತ ಮಕ್ಕಳನ್ನು ದಾಖಲು ಮಾಡಿಕೊಂಡು ತರಗತಿಗಳಿಗೆ ಕರೆತರುವ ಹಾಗೂ ತರಗತಿ ಮುಗಿದ ನಂತರ ಬಿಟ್ಟು ಬರಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಸ್ಥಳೀಯರ ಸಹಕಾರವನ್ನು ಪಡೆಯಲಾಗುವುದು ಎಂದರು.
ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ವಿನೂತನ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಈ ವಿಶೇಷ ಪ್ರಯತ್ನದ ಫಲವಾಗಿ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2ನೇ ಬಾರಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಪರೀಕ್ಷೆಗೆ ಹಾಜರಾದ ಸುಮಾರು 119000 ಮಕ್ಕಳ ಪೈಕಿ 41000 ಮಕ್ಕಳು ಉತ್ತೀರ್ಣರಾಗಿ ಶಿಕ್ಷಣದ ಮುಖ್ಯವಾಹಿನಿಗೆ ಬರುವಂತೆ ಆಗಿದೆ ಎಂದರು.

ಈ ರೀತಿ ಅವಕಾಶ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಶಾಲಾ ದಾಖಲಾತಿಗೆ ಸೂಚಿಸಲಾಗಿದೆ ಅಲ್ಲದೆ ಈಗಾಗಲೇ ಪೂರ್ಣಗೊಂಡ ಪಾಠಗಳ ಪುನರಾವರ್ತನೆ ಮಾಡಲು ಸೂಚಿಸಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಸುಮಾರು 30000ಕ್ಕೂ ಹೆಚ್ಚಿನ ಶಿಕ್ಷಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಇತಿಹಾಸ ಎನಿಸಿದೆ ಎಂದರು.
ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು 43000 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಕಾನೂನು ತೊಡಕಿನಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿಗೆ ನ್ಯಾಯಾಲಯದ ಆದೇಶ ಹೊರ ಬರುತ್ತಿದ್ದಂತೆ ಆಯ್ಕೆ ಆದ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗುವುದು. ಆಯ್ಕೆಯಾದ ಶಿಕ್ಷಕರು ತಾಳ್ಮೆಯಿಂದ ಇರುವಂತೆ ಮನವಿ ಮಾಡಿದರು.
ಈಗಾಗಲೇ ನೇಮಕಗೊಂಡ ಶಿಕ್ಷಕರು ಪ್ರತಿಭಾವಂತರೇ ಆಗಿರುವುದು ವಿಶೇಷ. ಊರಿಗೆ ಒಂದು ಶಾಲೆ ತೆರೆದರೆ ಅದುವೇ ಅಭಿವೃದ್ಧಿ ಎನ್ನುವ ಕಾಲ ಇತ್ತು. ಪ್ರಸ್ತುತ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಉತ್ಸುಕರಾಗಿದ್ದಾರೆ. ಖಾಸಗಿ ಶಾಲೆಗಳ ಕಾರಣದಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಕಣ್ಣೆದುರು ಇರುವ ಪ್ರಮುಖ ಕಾರ್ಯವಾಗಿದೆ ಎಂದರು.

ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಪೋಷಕರು ಮಕ್ಕಳನ್ನು ತಮ್ಮ ಮಡಿಲಿಗೆ ಹಾಕಿದ್ದಾರೆ. ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

Madhu Bangarappa ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಭಾರತಿಶೆಟ್ಟಿ ಅವರು ಮಾತನಾಡಿ, ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ ತಮಗೆ ಗುರಿ ತೋರಿಸಿದ ಶಿಕ್ಷಕರನ್ನು ಮರೆಯಲಾರರು. ಶಿಕ್ಷಕರು ಶ್ರೀಕೃಷ್ಣ ನಂತೆ ಮಾರ್ಗದರ್ಶಕ ಹಾಗೂ ಕರ್ಣನಂತಹ ಗೆಳೆಯ ಆಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಂಶುಪಾಲ ಬಸವರಾಜಪ್ಪ ಬಿ.ಇ.ಓ. ಸತ್ಯನಾರಾಯಣ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...