Monday, March 23, 2026
Monday, March 23, 2026

Snehal Sudhakar Lokhande ಜಿಲ್ಲೆಯಲ್ಲಿ ಸೆ 15 ರಿಂದ ಅ 2 ರವರೆಗೆಸ್ವಚ್ಛತಾ ಹಿ ಸೇವಾ ಜನಾಂದೋಲನ

Date:

Snehal Sudhakar Lokhande ಶಿವಮೊಗ್ಗ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹಿ ಸೇವಾ’ ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದ್ದಾರೆ.

ಅ. 2 ರಂದು ಮಹಾತ್ಮಾ ಗಾಂಧೀಜಿ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೆಯವಾಕ್ಯ ‘ಸ್ವಚ್ಛತೆಯೇ ದೈವತ್ವ’ ಎ0ಬ ಕನಸನ್ನು ನನಸಾಗಿಸಲು ಸೆ.15 ರಿಂದ ಅ.2 ರವರೆಗೆ 15 ದಿನಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.

ಈ ವರ್ಷದ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ‘ಕಸಮುಕ್ತ, ತ್ಯಾಜ್ಯಮುಕ್ತ ಭಾರತ’ ಎಂದು ಘೋಷಿಸಲಾಗಿದ್ದು, ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷಿ ಗುರಿ ಹೊಂದಲಾಗಿದೆ.

ಗ್ರಾಮಗಳ ಸ್ವಚ್ಛತೆಗೆ ಸ್ವಯಂ ಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲೂಕು, ಗ್ರಾ.ಪಂ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ನದಿ ತೀರ, ಸಾಂಸ್ಥಿಕ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು, ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮತ್ತು ಸದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗಿದೆ.

Snehal Sudhakar Lokhande ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆಯನ್ನು ಉತ್ತಮವಾಗಿ ಯಶಸ್ವಿಗೊಳಿಸಲು ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ ಶ್ರಮ ಅಗತ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...