Wednesday, June 24, 2026
Wednesday, June 24, 2026

Health Center ನಗರದ ವಾರ್ಡ್ ಗಳಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು ಒತ್ತಾಯ

Date:

Health Center ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರ ನಿವಾಸಿಗಳಿಗೆ ವಾರ್ಡ್ ನಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸುವ ಮೂಲಕ ತುರ್ತು ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲ ಕಲ್ಪಿಸಿ ಕೊಡಬೇಕು ಎಂದು ನಗರಸಭಾ ಸದಸ್ಯರು ಆರೋಗ್ಯ ಸಚಿವ ದಿನೇಶ್‌ಗುಂಡುರಾವ್ ಅವರನ್ನು ಗುರುವಾರ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಉಪ್ಪಳ್ಳಿ ನಗರಸಭಾ ಸದಸ್ಯ ಮುನೀರ್ ಅಹ್ಮದ್ ನಗರದ ಉಪ್ಪಳ್ಳಿ, ಕಲ್ಲುದೊಡ್ಡಿ, ಶಾಂತಿನಗರ , ಇಂದಿರಾಗಾAಧಿ ಹಾಗೂ ರಾಜೀವ್‌ಗಾಂಧಿ ಬಡಾವಣೆಯಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು ಆರೋಗ್ಯ ಸಮಸ್ಯೆ ಎದುರಾದರೆ 5 ಕಿ.ಮೀ. ಸಂಚರಿಸಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಪ್ರಸ್ತುತ ಈ ಬಡಾವಣೆಗಳಲ್ಲಿ ಅತಿಹೆಚ್ಚು ಕೂಲಿಕಾರ್ಮಿಕರು, ಡೊಂಗ್ರಿ ಗೇರೇಷಿಯಾ ಹಾಗೂ ಹಕ್ಕಿಪಿಕ್ಕಿ ಜನಾಂಗ ಸೇರಿದಂತೆ ಮಧ್ಯಮ ವರ್ಗದವರೇ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ರೋಗರುಜಿನಿಗಳಿಗೆ ತುತ್ತಾಗುವ ಸಂದರ್ಭವಿರುವುದರಿoದ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಉಪ್ಪಳ್ಳಿ ವಾರ್ಡ್ಗಳಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಿದರೆ ಸ್ಥಳೀಯ ಹಾಗೂ ಸುತ್ತಮುತ್ತಲಿನ ನರಗನಹಳ್ಳಿ, ಬ್ಯಾಗದಹಳ್ಳಿ ಗ್ರಾಮಸ್ಥರಿಗೂ ಬಹಳಷ್ಟು ಅನುಕೂಲವಾಗುವ ಜೊತೆಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾಗಲು ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

Health Center ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತರ ಘಟಕದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನಯಾಜ್ ಅಹ್ಮದ್, ಚಿಕ್ಕಮಗಳೂರು ನಗರಸಭಾ ಸದಸ್ಯರಾದ ಖಜಂಧರ್ ಮೋನು, ಜಾವೀದ್, ಶಾದಂ ಅಲಂ, ಪರಮೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...