Rotary Shimoga East ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಯಲ್ಲಿ ಜೀವನ ಕೌಶಲ್ಯಗಳ ಕಲಿಸಲು ಪ್ರಾಮುಖ್ಯತೆ ನೀಡಬೇಕು ಹಾಗೂ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಇರುವಂತೆ ಗಮನ ವಹಿಸಬೇಕು ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರ ಗಾಯತ್ರಿ ವಿದ್ಯಾಲಯದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕೆ ಪೂರಕವಾಗಿ ವಾತಾವರಣ ರೂಪಿಸಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಇಂಟರಾಕ್ಟ್ ಕ್ಲಬ್ ಮಕ್ಕಳಲ್ಲಿ ನಾಯಕತ್ವ ಗುಣದ ಜತೆಯಲ್ಲಿ ಉತ್ತಮ ವೇದಿಕೆಗಳನ್ನು ಒದಗಿಸುತ್ತದೆ. ಸೇವಾ ಮನೋಭಾವನೆ, ಪರಸ್ಪರ ಓಡನಾಟ ಹೆಚ್ಚುತ್ತದೆ. ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಬೌದ್ಧಿಕ ಸಾಮಾರ್ಥ್ಯ ವೃದ್ಧಿಸುತ್ತದೆ ಎಂದು ಹೇಳಿದರು.
ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕ, ಲೇಖನ ಸಾಮಾಗ್ರಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಬ್ಧಕೋಶ ವಿತರಿಸಲಾಯಿತು. ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಯಶವಂತ್ ಜಿ.ಶೇಟ್, ಕಾರ್ಯದರ್ಶಿಯಾಗಿ ಮನೀಶ್ ತಂಡದೊಂದಿಗೆ ಅಧಿಕಾರ ಸ್ವೀಕರಿಸಿದರು.
ಗಾಯತ್ರಿ ವಿದ್ಯಾಲಯ ಖಜಾಂಚಿ ಚಂದ್ರಹಾಸ ಪಿ ರಾಯ್ಕರ್ ಮಾತನಾಡಿ, ಮಕ್ಕಳು ಶಿಕ್ಷಣದ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಹಾಗೂ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಗೌರವಿಸಿದರು.
Rotary Shimoga East ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ವಿಜಯ ರಾಯ್ಕರ್, ದಿವ್ಯಾ ಪ್ರವೀಣ್, ಗಾಯತ್ರಿ ವಿದ್ಯಾಲಯ ಕಾರ್ಯದರ್ಶಿ ವೆಂಕಟೇಶ್ ಶೇಟ್ ಮತ್ತಿತರರು ಉಪಸ್ಥಿತರಿದ್ದರು.