Friday, March 20, 2026
Friday, March 20, 2026

Bhadravati VISL ಭದ್ರಾವತಿ ವಿಐಎಸ್ಎಲ್ ನಲ್ಲಿ ಸರ್ ಎಂವಿ ಜಯಂತಿ ಆಚರಣೆ

Date:

Bhadravati VISL ಅತ್ಯುತ್ತಮ ಇಂಜಿನೀಯರ್, ರಾಜನೀತಿಙ್ಞ, ದಾರ್ಶನಿಕ, ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನವನ್ನು ಇಂಜಿನೀರ‍್ಸ್ ದಿನಾಚರಣೆಯನ್ನಾಗಿ ಅಚರಿಸಿ, ದಿನಾಂಕ 15-9-2023 ರಂದು ವಿಐಎಸ್‌ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಅಜಯ್ ಸೋಮ್‌ಕುವಾರ್, ಪ್ರಧಾನ ಕಾರ್ಯದರ್ಶಿ, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಇವರುಗಳು ವಿಐಎಸ್‌ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

Bhadravati VISL ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದರಾದ ಮಾನ್ಯ ಶ್ರೀ ಬಿ.ವೈ.ರಾಘವೇಂದ್ರರವರೂ ಸಹ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮ ಗೌರವ ಸೂಚಿಸಿ, ನೆರೆದ ಸಮೂಹವನ್ನುದ್ದೇಶಿಸಿ ಮಾತನಾಡಿದರು.

ವಿಐಎಸ್‌ಎಲ್ ಸಮುದಾಯದವರು ಮಾನ್ಯ ಸಂಸದರನ್ನು ಸನ್ಮಾನಮಾಡಿ ಗೌರವ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...