Saturday, September 28, 2024
Saturday, September 28, 2024

Madhu Bangarappa ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಅವರಿಂದ ಸೂಚನೆ

Date:

Madhu Bangarappa ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ತರಹದ ಆಕ್ಷೇಪಣೆ ಇದ್ದು ಸದರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಗುಣಮಟ್ಟ ಸರಿಯಾಗಿದ್ದಲ್ಲಿ ಮಾತ್ರ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಸ್ಮಾರ್ಟ್ಸಿಟಿ ವ್ಯವಸ್ಥಾಪಕ ಮಾಯಣ್ಣಗೌಡ ಅವರಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್ಸಿಟಿ ಯೋಜನೆ, ಮೆಗ್ಗಾನ್ ಆಸ್ಪತ್ರೆ, ಪ್ರವಾಸೋದ್ಯಮ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿದ್ಯುತ್ ಹಾಗೂ ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿರುವ ಹಾಗೂ ಅಪೂರ್ಣವಾಗಿರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಂತೆ ಸೂಚಿಸಿದ ಅವರು ಮಹಾನಗರಪಾಲಿಕೆ ಆವರಣದಲ್ಲಿ ಅನುಮತಿ ಇಲ್ಲದೆ ಕೈಕೊಳ್ಳಲಾಗಿರುವ ಕಾಮಗಾರಿ ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ಅವೈಜ್ಞಾನಿಕವಾಗಿ ಬ್ಲಾಕ್ಗಳನ್ನು ಅಳವಡಿಸಿರುವ ಕಾಮಗಾರಿಗಳು, ಇನ್ನೂ ಕೆಲವು ಸ್ಥಳಗಳಲ್ಲಿ ಅವಶ್ಯಕತೆಗಿಂತ ಹೆಚ್ಚಿನ ಹಣ ವಿನಿಯೋಗ ಮಾಡಿರುವುದು ಕಂಡು ಬಂದಿದೆ ಅವೈಜ್ಞಾನಿಕವಾಗಿ ಮಾಡಲಾಗಿರುವ ಪುಟ್ಬಾತ್ ಕಾಮಗಾರಿಯಿಂದಾಗಿ ಮಳೆನೀರು ನಿಂತು ಜನಸಾಮಾನ್ಯರಿಗೆ, ಪಾದಚಾರಿಗಳಿಗೆ, ವಾಹನ ಚಾಲಕರಿಗೆ ತೀವ್ರ ತರಹದ ಅಡಚಣೆ ಉಂಟಾಗುತ್ತಿದೆ. ಸ್ಟೇಡಿಯಂ ಸುತ್ತಲೂ ನಿರ್ಮಾಣಗೊಂಡಿರುವ ವಾಕಿಂಗ್‌ಪಾತ್ ಕಾಮಗಾರಿ ಅವೈಜ್ಞಾನಿಕವಾಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ದೂರುಗಳಿವೆ ಎಂದವರು ನುಡಿದರು.

ಇಂತಹ ಅನೇಕ ಯೋಜನೆಗಳ ಅನುಷ್ಟಾನದಿಂದಾಗಿ ಯೋಜನೆಯ ಆರಂಭದಿoದ ಮುಕ್ತಾಯ ಹಂತದವರೆಗೂ ಜನ ಕಿರಿಕಿರಿ ಅನುಭವಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಸದರಿ ವಿಷಯವನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳ ಕುರಿತು ವಿವರವಾದ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸಚಿವರು ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಮಾಯಣ್ಣಗೌಡ ಅವರಿಗೆ ಸೂಚಿಸಿದರು.
ಶಿವಮೊಗ್ಗ ನಗರದ ಗೋಪಾಳ ಬಡಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಹೆಸರಿನಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುತಾಣದ ಹೆಸರನ್ನು ತೆರವುಗೊಳಿಸಿ ಸ್ಮಾರ್ಟ್ಸಿಟಿ ಎಂದು ನಾಮಪಲಕ ಅಳವಡಿಸಿ ರಾಜ್ಯದ ಹಿರಿಯ ನಾಯಕರಿಗೆ ಅಗೌರವ ತೋರಿಸಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಸಂಬAಧ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಯಣ್ಣ ಗೌಡ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ||ಆರ್.ಸಲ್ವಮಣಿ ಅವರು ಮಾತನಾಡಿ, ಕೆಲವು ಕಾಮಗಾರಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಇಲ್ಲದೆ ನ್ಯೂನ್ಯತೆಗಳಾಗಿವೆ ಎಂದರು. ನಗರದ ಹೊರವಲಯದಲ್ಲಿರುವ ಮುದ್ದಣ್ಣನಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದ ಅವರು ಆಡಳಿತ ವ್ಯವಸ್ಥೆಯಲ್ಲಿ ತಲೆತೂರಿಸುವ ವ್ಯಕ್ತಿಗಳು ಹಾಗೂ ಅದರಲ್ಲಿ ಶಾಮಿಲಾಗಿರುವ ವ್ಯಕ್ತಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ನುಡಿದರು.
ರಾಜ್ಯದಲ್ಲಿ ಬರ ಘೋಷಣೆಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಬೆಳೆ ಪರಿಹಾರ ಸಮೀಕ್ಷೆಯಲ್ಲಿ ಮಾನವೀಯ ಆಧಾರದ ಮೇಲೆ ರೈತರಿಗೆ ಅನುಕೂಲ ವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಸಕಾಲಿಕ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ ಇಲಾಖೆಯ ಅಭಿಯಂತರರು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಮೆಸ್ಕಾಂ ಅಧೀಕ್ಷಕರಿಗೆ ಸೂಚಿಸಿದರು.
ವಿಶೇಷವಾಗಿ ಸೊರಬ ತಾಲೂಕಿನ ಮೂಡಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಏತ ನೀರಾವರಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಸಹಕಾರ ನೀಡುವಂತೆ ಸೂಚಿಸಿದ ಅವರು, ಮೂಡಿ ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರವನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದವರು ನುಡಿದರು.

ಜಿಲ್ಲೆಯಲ್ಲಿ ಕೋಟಿಪುರ, ಗುಡವಿ, ಬಳ್ಳಿಗಾವಿ ಸೇರಿದಂತೆ ಅನೇಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಈ ಸಂಬoಧ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮಪ್ಪ ಅವರಿಗೆ ಸೂಚಿಸಿದರು.

ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಯಿಂದಾಗಿ ಜನಸಾಮಾನ್ಯರಲ್ಲಿ ಆರ್ಥಿಕ ವಹಿವಾಟು ಹೆಚ್ಚಲಿದೆ ಮಾತ್ರವಲ್ಲ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದವರು ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಅಗತ್ಯವಾಗಿರುವ ಭೂಮಿಯನ್ನು ಸೂಕ್ತ ಸ್ಥಳದಲ್ಲಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Madhu Bangarappa ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...