Friday, December 5, 2025
Friday, December 5, 2025

JDS Karnataka ಶೇ.33 ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸ್ವಾಗತವಿದೆ-ಕುಮಾರಸ್ವಾಮಿ

Date:

JDS Karnataka ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ.

ಶ್ರೀ ಹೆಚ್. ಡಿ. ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು.

27 ವರ್ಷಗಳ ನಂತರ ಮಾನ್ಯ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ.

1995ರಲ್ಲಿ ಮಾನ್ಯ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು.

JDS Karnataka ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ.

ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ.

ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎನ್ನುವುದು ನನ್ನ ಮನವಿ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...