Friday, June 13, 2025
Friday, June 13, 2025

DC Shivamogga ಕಾಲುಬಾಯಿ ರೋಗ ಲಸಿಕಾಕರಣ: ಗ್ರಾಮದ ಮನೆಮನೆಗೆ ಭೇಟಿ

Date:

DC Shivamogga ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 4ನೇ ಸುತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ
ದಿ: 26-09-2023 ರಿಂದ 25-10-2023 ವರೆಗೆ ಉಚಿತವಾಗಿ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುವುದು.

ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದ್ದು, ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕುವರು. ಯಾರೂ ಕೂಡ ತಮ್ಮ ಎಮ್ಮೆ, ದನ ಕರುಗಳು ಲಸಿಕೆಯಿಂದ ವಂಚಿತರಾಗದಂತೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಶೇ.100 ಲಸಿಕಾ ಪ್ರಗತಿ ಸಾಧಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಹೊಸನಗರ, ಸೊರಬ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಕೃತಕ ಗರ್ಭಧಾರಣೆ ಪ್ರಗತಿ ಸ್ವಲ್ಪ ಕಡಿಮೆಯಿದ್ದು, ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

DC Shivamogga ಹೋರಿ ಬೆದರಿಸುವವರು ಮುಂಚಿತವಾಗಿ ಪಶುಪಾಲನ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಪಡೆದು 15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದರು.
ಪೆಟ್ ಶಾಪ್ ನೋಂದಣಿ ಕಡ್ಡಾಯ:

ಪ್ರ್ರಿವೆನ್ಶನ್ ಆಫ್ ಕ್ರುಯೆಲ್ಟಿ ಟು ಅನಿಮಲ್ಸ್(ಪೆಟ್ ಶಾಪ್)ರೂಲ್ಸ್ 2018 ರ ಪ್ರಕಾರ ಜಿಲ್ಲೆಯ ಪೆಟ್ ಶಾಪ್ ಮಾಲೀಕರು ತಾವು ಉದ್ದಿಮೆ ಪರವಾನಗಿ ತೆಗೆದುಕೊಳ್ಳುವ ಮುನ್ನ ರೂ.5000 ಶುಲ್ಕ ನೀಡಿ ಜಿಲ್ಲಾ ಪ್ರಾಣಿ ದಯಾ ಸಂಘದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಳ್ಳದೇ ಪೆಟ್ ಶಾಪ್ ವಹಿವಾಟು ಮಾಡಿದರೆ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು ಎಂದ ಅವರು ಪ್ರಸ್ತುತ ನೋಂದಣಿಗೆ 15 ಅರ್ಜಿಗಳು ಬಂದಿದ್ದು ಈ ಸಂಬಂಧ ಸಮಿತಿ ರಚಿಸಿ ನಿಯಮಾನುಸಾರ ಅನುಮೋದನೆ ನೀಡುವಂತೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1586 ಗ್ರಾಮಗಳಿದ್ದು, 4ನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ 639250 ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 653573 ಸಿರಿಂಜ್‍ಗಳು ಲಭ್ಯವಿದ್ದು ಸರಬರಾಜಾದ ಲಸಿಕೆ ಶೇಖರಿಸಿಡಲು 4 ವಾಕ್ ಇನ್ ಕೂಲರ್ ಮತ್ತು 23 ಐಸ್‍ಲೈನ್ ರೆಫ್ರಿಜರೇಟರ್‍ಗಳಿವೆ ಹಾಗೂ ಒಟ್ಟು 467 ಲಸಿಕಾದಾರರು ಇದ್ದಾರೆ. ಕಳೆದ 3 ನೇ ಲಸಿಕಾ ಅಭಿಯಾನದಲ್ಲಿ 554010 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ.95 ಪ್ರಗತಿ ಸಾಧಿಸಲಾಗಿತ್ತು. ಎಂದು ಮಾಹಿತಿ ನೀಡಿದರು

ಲಸಿಕಾ ಅಭಿಯಾನದ ಮಾಹಿತಿ ವೆಬ್‍ಸೈಟ್ www.ahvs.kar.nic.in ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶಪಾಲನಾ ಇಲಾಖೆಯ ಪಶು ಆಸ್ಪತ್ರೆ ಅಥವಾ ಹಾಲು ಉತ್ಪಾದಕರ ಸಹಕಾ ಸಂಘಗಳನ್ನು ಸಂಪರ್ಕಿಸಬಹುದೆಂದರು.ಸಭೆಯಲ್ಲಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೊಸ್ಟರ್‍ನ್ನು ಡಿಸಿ ಮತ್ತು ಇತರೆ ಅಧಿಕಾರಿಗಳು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಪಶುವೈದ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...