Sunday, August 23, 2026
Sunday, August 23, 2026

Scouts and Guides ದೇಶಭಕ್ತಿಗೀತೆ ಗಾಯನ ರಾಜ್ಯಮಟ್ಟಕ್ಕೆ ಆಯ್ಕೆ

Date:

Scouts and Guides ಸ್ಕೌಟ್ ದಳದ ನಾಯಕ ನಾಯಕಿಯರ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ ವಿದ್ಯಾ ಎಸ್. ಹಾಗೂ ಹೋಲಿ ರೀಡಿಮರ್ ಎಚ್‌ಪಿಎಸ್ ಶಾಲೆಯ ಟಿ.ಎನ್.ಮಂಜುನಾಥ್ ಅವರು ರಾಜ್ಯಮಟ್ಟದ ದೇಶಭಕ್ತಿ ಗೀತ ಗಾಯನ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ನಾಡೋಜ ಪ್ರಶಸ್ತಿ ಪುರಸ್ಕೃತ ಡಾ. ಗೋ.ರು.ಚನ್ನಬಸಪ್ಪ ಹೆಸರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಸ್ಕೌಟ್ ನ ದಳ ನಾಯಕ ನಾಯಕಿಯರ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ್ ಎಚ್.ಮಾತನಾಡಿ, ದಳ ನಾಯಕರು, ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ಸಂಸ್ಕಾರ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ. ರಾಜ್ಯ ಸಂಸ್ಥೆಯು ಎಲ್ಲ ಜಿಲ್ಲಾ ಸಂಸ್ಥೆಗಳಲ್ಲಿ ಸ್ಪರ್ಧೆ ನಡೆಸುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ರಾಜ್ಯಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಜಿಲ್ಲಾ ಆಯುಕ್ತ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದವರಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ವಿತರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಸೇವಾ ಚಟುವಟಿಕೆಗಳ ಜತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳಿಗೆ ಮುಂದಿನ ದಿನಗಳಲ್ಲಿ ತರಬೇತಿ ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
Scouts and Guides ರಾಜ್ಯ ಸಂಘಟನಾ ಸಹಾಯಕ ಆಯುಕ್ತ ಭಾರತಿ ಡಯಾಸ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ ವಿ.ಅವಲಕ್ಕಿ, ಮಲ್ಲಿಕಾರ್ಜುನ ಕಾನೂರ್, ತೀರ್ಪುಗಾರರಾದ ಸಂಧ್ಯಾರಾಣಿ, ಅನಿತಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...