Saturday, December 6, 2025
Saturday, December 6, 2025

Department of Labor ಕಾಯ್ದೆ ಪ್ರಕಾರ ಅಂಗಡಿ ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ-ಸೋಮಣ್ಣ

Date:

Department of Labor ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅನುಸಾರ ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಹಾಸನ ಪ್ರಾದೇಶಿಕ ಕಚೇರಿ ಆಯುಕ್ತ ಸೋಮಣ್ಣ ಹೇಳಿದರು.

ಶಿವಮೊಗ್ಗ ನಗರದ ಸೂಡಾ ಕಚೇರಿಯ ಕಟ್ಟಡದಲ್ಲಿರುವ ಕಾರ್ಮಿಕ ಇಲಾಖೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಯಾವುದೇ ಕಾರ್ಮಿಕರು ಇಲ್ಲದಿದ್ದರೂ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದು, ಕಾರ್ಮಿಕರ ಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ಧ ಸೌಲಭ್ಯ ಒದಗಿಸುವುದು ಕಾಯ್ದೆಯ ಉದ್ದೇಶ ಆಗಿದೆ ಎಂದು ತಿಳಿಸಿದರು.

ಎಲ್ಲ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆ ಜಾಲತಾಣದಲ್ಲಿ ನೋಂದಣಿ ಮಾಡಿಸಿ ಮಾಹಿತಿ ದಾಖಲಿಸಬೇಕು. ಅಂಗಡಿ ವಿಳಾಸ ಹಾಗೂ ಮಾಲೀಕರ ಗುರುತೀನ ಚೀಟಿ ಸೇರಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು ಎಂದರು.

ನೋಂದಣಿ ಪ್ರಕ್ರಿಯೆಯಲ್ಲಿ ಸಮಸ್ಯೆ ಕಂಡುಬoದಲ್ಲಿ ಇಲಾಖೆ ಸಹಾಯವಾಣಿ 08029753059 ಅಥವಾ 155214 ಅಥವಾ ಹತ್ತಿರದ ಕಾರ್ಮಿಕ ಇಲಾಖೆ ಕಚೇರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದರು.

Department of Labor ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಕುರಿತು ಬಹುತೇಕ ಜನರಿಗೆ ಅರಿವಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆಯ ಕಾಯ್ದೆಯಡಿಯಲ್ಲಿ ಎಲ್ಲ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳು ಕಾರ್ಮಿಕರ ಮಾಹಿತಿ ನೀಡಿ ನೋಂದಣಿ ಮಾಡಿಸಬೇಕು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಜಾಗೃತಿ ಮೇಳ ಆಯೋಜಿಸಿ ಹೆಚ್ಚಿನ ಸಂಸ್ಥೆಗಳ ನೋಂದಣಿಗೆ ಅನುಕೂಲವಾಗುವಂತೆ ಸಹಕರಿಸಲಾಗುವುದು. ಶಿವಮೊಗ್ಗದ ಅಂಗಡಿ ಮಾಲೀಕರು ಹಾಗೂ ವಾಣಿಜ್ಯ ಸಂಸ್ಥೆಗಳು ಭಾಗವಹಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಪ್ರದೀಪ್ ಯಲಿ, ಕಾರ್ಮಿಕ ನೀರಿಕ್ಷಕರಾದ ಭೀಮೇಶ್, ಸುಖೀತಾ, ಕಾರ್ಮಿಕ ಅಧಿಕಾರಿ ಸುಮಾ ದೇವರಾಜ್, ಮಂಜುನಾಥ್, ಎನ್.ಎಸ್.ರಮೇಶ್, ಸುರೇಶ್ ಕುಮಾರ್, ವಿಜಯ ದಿನಕರ ಹಾಗೂ ವಾಣಿಜ್ಯ ಉದ್ಯಮಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...