Friday, November 22, 2024
Friday, November 22, 2024

Dengue & Chicken Gunya Disease ಡೆಂಗ್ಯು& ಚಿಕನ್ ಗುನ್ಯ ರೋಗದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಜಾಗೃತಿ ಮಾಹಿತಿ

Date:

Dengue & Chicken Gunya Disease ಡೆಂಗ್ಯು ಮತ್ತು ಮತ್ತು ಚಿಕುನ್‍ಗುನ್ಯ ರೋಗದ ಬಗ್ಗೆ ಎಚ್ಚರಿಕೆ ವಹಿಸಿ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದರು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗ್ಯು ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5 ರಿಂದ 7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗ ಲಕ್ಷಣಗಳು :

ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈಕೈ ಮತ್ತು ಕೀಲು ನೋವು, ವಾಕರಿಕೆ/ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಮತ್ತು ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು, ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು/ರಕ್ತಸ್ರಾವದ ಗುರುತುಗಳು, ಕಪ್ಪು ಬಣ್ಣದ ಮಲ ವಿಸರ್ಜನೆ, ವಿಪರೀತ ಬಾಯಾರಿಕೆ, ತಣ್ಣನೆಯ ಬಿಳುಚಿದ ಚರ್ಮ, ಜ್ಞಾನ ತಪ್ಪುವುದು, ರಕ್ತದ ಒತ್ತಡದ ಕುಸಿತ ಮತ್ತು ನಾಡಿ ಬಡಿತದ ಕುಸಿತ ಇವು ಡೆಂಗ್ಯು ರಕ್ತ ಸ್ರಾವ ಜ್ವರ ಮತ್ತು ಡೆಂಗ್ಯು ಆಘಾತ ಜ್ವರದ ಲಕ್ಷಣಗಳು.

ಡೆಂಗಿ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣಗೊಂಡು ಡೆಂಗ್ಯು ರಕ್ತ ಸ್ರಾವ ಜ್ವರ ಹಾಗೂ ಡೆಂಗ್ಯು ಆಘಾತ ಜ್ವರದಿಂದ ಸಾವು ಸಂಭವಿಸಬಹುದು. ಆದ್ದರಿಂದ ಜ್ವರದ ಲಕ್ಷಣಗಳು ಕಂಡುಬಂದ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.

ಚಿಕುನ್‍ಗುನ್ಯ :

ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಚಿಕುನ್‍ಗುನ್ಯ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಆದರೆ ಚಿಕುನ್‍ಗುನ್ಯ ಮಾರಣಾಂತಿಕವಲ್ಲ.

ರೋಗದ ಲಕ್ಷಣಗಳು :

Dengue & Chicken Gunya Disease ಇದ್ದಕ್ಕಿದ್ದಂತೆ ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಾಣಿಸಿಕೊಳ್ಳುವುದು. ಚಿಕುನ್‍ಗುನ್ಯ ಸೋಂಕಿಗೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದ್ದರಿಂದ ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮಾಡಲಾಗುವುದು.
ಈಡಿಸ್ ಸೊಳ್ಳೆಗಳ ಉತ್ಪತ್ತಿ

ತಾಣಗಳು :
ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿನ ನೀರು ಶೇಖರಣಾ ಸಂಗ್ರಾಹಕಗಳಾದ, ಸಿಮೆಂಟ್ ತೊಟ್ಟಿಗಳು, ಬ್ಯಾರೆಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆಗಳು, ಏರ್-ಕೂಲರ್, ರೆಫ್ರಿಜರೇಟರ್‍ನ ಡಿ-ಫ್ರಂಟ್ ಟ್ರೇಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲಾಸ್, ಎಳನೀರಿನ ಚಿಪ್ಪು ಹಾಗೂ ಇತರ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ.

ಆದ್ದರಿಂದ ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಹಗಳು ಮತ್ತು ಮೇಲ್ಚಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು.

ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು. ಏರ್ ಕೂಲರ್‍ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು. ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ/ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಡೆಂಗಿ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದು ಹಾಗೂ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.

ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿತಾಣ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಸ್ವಯಂಸೇವಕರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು.

ಶಾಲಾ ಕಾಲೇಜು, ಅಂಗನವಾಡಿ, ಸರ್ಕಾರಿ / ಖಾಸಗಿ ಕಛೇರಿಗಳು, ಬಸ್ ಡಿಪೆÇೀ ಇತ್ಯಾದಿಗಳಲ್ಲಿಯೂ – ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ.

ಡೆಂಗ್ಯು ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬೇಕು. ಡೆಂಗ್ಯು ಜ್ವರದ ಲಕ್ಷಣಗಳಿದ್ದಲ್ಲಿ ಬ್ಲೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...