Siddaramaiah ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, 2013 -14ರಲ್ಲಿ ನಾವು ಅಧಿಕಾರಕ್ಕೆ ಬಂದಾಗ 14,048 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಇತ್ತು, 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಏರಿಕೆಯಾಗಿತ್ತು. ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ಒಟ್ಟು ಉತ್ಪಾದನೆ ಬಹುತೇಕ ದುಪ್ಪಟ್ಟಾಗಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರಲು ಕಾರಣ ಏನು? ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಇನ್ನುಮುಂದೆ ಉಷ್ಣವಿದ್ಯುತ್ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡಬಾರದು.
ನೀರಾವರಿಗೆ ಸೌರ ವಿದ್ಯುತ್ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಅಕ್ರಮ ನೀರಾವರಿ ಪಂಪ್‌ಸೆಟ್ ಹಾವಳಿ ಹಾಗೂ ವಿದ್ಯುತ್ ಪ್ರಸರಣ ಸೋರಿಕೆಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
Siddaramaiah ಪ್ರಸಕ್ತ ವರ್ಷದಲ್ಲಿ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗಾಗಿ 2,500 ಕೋಟಿ ರೂ. ಒದಗಿಸಲಾಗಿದೆ. ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಹಾಗೂ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.