Selvamani R ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 28ರಂದು ವಿಸರ್ಜನೆ ಮಾಡುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.
ಭಕ್ತಾದಿಗಳು ಕಾರ್, ದ್ವಿಚಕ್ರವಾಹನ, ಬಸ್ ಇತರ ವಾಹನಗಳಲ್ಲಿ ಬಂದು ಹೋಗಲಿದ್ದಾರೆ.
ಈ ನಿಟ್ಟಿನಲ್ಲಿ ಸೆಪ್ಟೆಂಬರ್ 28ರಂದು ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಲವು ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ ಹಾಗೂ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಹಿತ ದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಆರ್. ಸೆಲ್ವಾ ಮಣಿ ಅವರು ತಾತ್ಕಾಲಿಕ ಮಾರ್ಗ ಬದಲಾವಣೆಯನ್ನು ಮಾಡಿದ್ದಾರೆ.
ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 117ರಲ್ಲಿ ವಾಹನಗಳ ಸುಗಮ ಸಂಚಾರ, ನಿಲುಗಡೆ, ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
Selvamani R ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಸರ್ಜನೆಯ ಮೇಲೆ ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್ ಪಿ ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, sn ಸರ್ಕಲ್, ಬಿಹೆಚ್ ರಸ್ತೆ ಮುಖಾಂತರ ಎ ಎ ಸರ್ಕಲ್, ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್-ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲ್ ಸರ್ಕಲ್, ಬಿ ಹೆಚ್ ರಸ್ತೆ, ಕೋಟಿ ಪೋಲಿಸ್ ಠಾಣೆ ರಸ್ತೆ-ಕೋಟೆರಸ್ತಿ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.ಈ ಮೆರವಣಿಗೆಯ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧ ಮಾಡಲಾಗಿದೆ. ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳನ್ನು ಎಂ ಆರ್ ಎಸ್ ಸರ್ಕಲ್ ಬೈಪಾಸ್ ರಸ್ತೆಯ ಮುಖಾಂತರ ರಸ್ತೆಯನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ಅವರು ಹೇಳಿದ್ದಾರೆ.