Dr. Selvamani R ಅಕ್ಟೋಬರ್ 1ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ಸುಗಮ ವಾಹನ ಸಂಚಾರ ಸಲುವಾಗಿ ಶಿವಮೊಗ್ಗ ನಗರದಲ್ಲಿ ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಅಕ್ಟೋಬರ್ 1ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ವಾಹನ ಸಂಚಾರ ನಿಷೇಧ, ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ.ಆರ್. ಸೆಲ್ವಮಣಿ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 117ರ ಅನ್ವಯ ವಾಹನ ಸುಗಮ ಸಂಚಾರ, ನಿಲುಗಡೆ ಹಾಗೂ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ.
Dr. Selvamani R ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆಯು ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭವಾಗುತ್ತದೆ. ಗಾಂಧಿ ಬಜಾರ್ ಎರಡನೇ ಕ್ರಾಸ್, ಬಿಹೆಚ್ ರಸ್ತೆ, ಮೀನಾಕ್ಷಿ ಭವನ, ಟ್ಯಾಂಕ್ ಬಾಂಡ್ ರಸ್ತೆ , ಬಾಪೂಜಿನಗರ ಮುಖ್ಯ ರಸ್ತೆ ಟ್ಯಾಂಕ್ ಮೊಹಲ್ಲಾ, ಬಾಲರಾಜ್ ಅರಸ್ ರಸ್ತೆ, ಎನ್ಟಿ ರಸ್ತೆ ಗುರುದೇವ ರಸ್ತೆ ಕ್ಲಾರ್ಕ್ ಪೇಟೆ ಈ ರಸ್ತೆ ಮಾರ್ಗವಾಗಿ ಅಮೀರ್ ಅಹ್ಮದ್ ಸರ್ಕಲ್ ತಲುಪುತ್ತದೆ. ಈ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಲಷ್ಕರ್ ಮೊಹಲ್ಲ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭದ್ರಾವತಿ, ರಸ್ತೆಯನ್ನು ಕಲ್ಪಿಸಲಾಗಿದೆ.