Siddaramaiah ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ. 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Siddaramaiah ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ.
ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.